ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ಕಾರಂಜಿಯಿಂದ ಚಿಮ್ಮಿದ ಸುರೇಶ್ ಮಾತು
ಬೆಂಗಳೂರು, ಬುಧವಾರ, 2 ಜುಲೈ 2008   ( 15:05 IST )
ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ ವಿಚಾರ. ಕಾರಂಜಿ ಒಂದು ಯೂತ್ ಮೂವಿ. ಹಣಕ್ಕಾಗಿ ಚಿತ್ರ ಮಾಡುವುದಿಲ್ಲ. ಜನ ಇದು ನನ್ನ ಚಿತ್ರ ಎಂದು ಗುರುತಿಸಬೇಕು. ಹಿಂದಿನ ಎಲ್ಲಾ ಚಿತ್ರಗಳಿಗಿಂತ ಇಲ್ಲಿ ವಿಶಿಷ್ಟವಾದ ಸಂಗೀತವನ್ನು ನೀಡಲಾಗಿದೆ. ಈ ಚಿತ್ರ ಸೋತರೂ ದಾರಿ ಬದಲಿಸುವುದಿಲ್ಲ... ಹೀಗೆ ಸುರೇಶ್ ಮಾತುಗಳು ಸಾಗಿದವು.

ಸುರೇಶ್ ಕೈಯಲ್ಲಿದ್ದ ಮೈಕ್ ನಿರ್ದೇಶಕ ಶ್ರೀಧರ್ ಕೈ ಸೇರಿತ್ತು. 'ಈ ಚಿತ್ರದಲ್ಲಿ ನನಗೆ ಒಳ್ಳೆಯ ತಂತ್ರಜ್ಞರು ಸಿಕ್ಕಿದ್ದಾರೆ. ಈ ಹಿಂದೆ ಕೆಲವು ಧಾರಾವಾಹಿ, ಸಾಕ್ಷ್ಯಾಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದೊಂದು ಸಂಗೀತಮಯ ಚಿತ್ರ. ಸುರೇಶ್ ನನಗೊಂದು ಉತ್ತಮ ಅವಕಾಶ ನೀಡಿದ್ದಾರೆ' ಎಂದರು ನಿರ್ದೇಶಕ.

ಚಿತ್ರದಲ್ಲಿ ನಾಯಕ ವಿಜಯ್ ರಾಘವೇಂದ್ರ ಗಿಟಾರ್ ವಾದಕನ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ವೀರಸಮರ್ಥ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಏಳು ಹಾಡುಗಳಿದ್ದು, ಆರು ಬಿಟ್‌ಗಳಿವೆ. ಸಂತ ಶಿಶುನಾಳ ಷರೀಫರ ಹಾಡನ್ನು ಇಲ್ಲಿ ಬಳಸಲಾಗಿದೆಯಂತೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರತಿಭಟನೆಗಿಳಿದ ಗಾಯಕರು
ಗೋಲ್ಡನ್‌ಸ್ಟಾರ್ ಗಣೇಶನ ಹುಟ್ಟುಹಬ್ಬ
ಜನ್ಮದ ನಾಯಕಿ ಬದಲು
ಮೋಹನ್ ಬಿಚ್ಚು ಮಾತು
ಲಿಮ್ಕಾ ಸೇರಿದ ಅಪರೇಶನ್ ಅಂಕುಶ
ಕಬಡ್ಡಿ ರಂಪಾಟ!
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...