|
| ಪೈರಸಿ ಖದೀಮರ ವಿರುದ್ಧ ಕಿಡಿಕಾರಿದ ಜಯಮಾಲ |
| ಬೆಂಗಳೂರು, ಶುಕ್ರವಾರ, 4 ಜುಲೈ 2008 ( 19:10 IST ) | |
ಪೈರಸಿ ಮಾಡುವವರನ್ನು ವಿರುದ್ಧ ಗೂಂಡಾ ಕಾಯ್ದೆ ಅಡಿ ಬಂಧಿಸಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಾಣಿಜ್ಯ ಮಂಡಳಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಜಯಮಾಲ ಈ ಒತ್ತಾಯ ಮಾಡಿದರು.
ಇದಲ್ಲದೆ ಕ್ರೌರ್ಯ, ಅಶ್ಲೀಲ ಹಾಗೂ ರಿಮೇಕ್ ಚಿತ್ರಗಳನ್ನು ಹೊರತುಪಡಿಸಿ ಉಳಿದ ಕನ್ನಡ ಚಿತ್ರಗಳಿಗೆ 10 ಲಕ್ಷ ರೂ. ಸಹಾಯಧನ ವಿತರಿಸಬೇಕು ಮತ್ತು ನಿರ್ಮಾಪಕರ ಹಿತದೃಷ್ಟಿಯಿಂದ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ವಿನಂತಿಸಿದರು.
ರಾಜ್ಯದಲ್ಲಿ ಚಿತ್ರಮಂದಿರಗ ಸಾಕಷ್ಟಿಲ್ಲ. ರಾಜ್ಯದಲ್ಲಿ ಜಾರಿಯಲ್ಲಿರುವ 1952ರ ಸಿನಿಮಾಟೋಗ್ರಫಿ ಕಾಯ್ದೆಯನ್ನು ಸರಳೀಕರಣಗೊಳಿಸಿ ಈ ಕಾಯ್ದೆಗೆ ತಿದ್ದುಪಡಿ ತರಬೇಕು. ಕೇರಳ ರಾಜ್ಯದಲ್ಲಿ ಈಗಾಗಲೇ ಚಲನಚಿತ್ರ ಅಕಾಡಮಿ ಸ್ಥಾಪನೆಯಾಗಿದೆ. ಕರ್ನಾಟಕದಲ್ಲೂ ಆಕಾಡಮಿ ಸ್ಥಾಪಿಸಿದರೆ ಉದ್ಯಮದ ಅಭಿವೃದ್ದಿಗೆ ನೆರವಾಗುತ್ತದೆ ಎಂದರು. ಇದು ಅಂತಾರಾಷ್ಟ್ರೀಯ ಮಹಿಳಾ ವರ್ಷವೆಂದು ಘೋಷಿತ ವರ್ಷ. ಆದ್ದರಿಂದ ಮಹಿಳೆಯರ ಸಮಸ್ಯೆ ಕುರಿತ ಚಲನಚಿತ್ರಗಳಿಗೆ 25 ಲಕ್ಷ ಸಹಾಯಧನ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ನೀವು 'ನೀ ಟಾಟಾ ನಾ ಬಿರ್ಲಾ' ಚಿತ್ರದ ಮೊದಲ ದಿನದ ಪ್ರದರ್ಶನವನ್ನು ಕಪಾಲಿ ಚಿತ್ರಮಂದಿರದಲ್ಲಿ ನೋಡಿದ್ದರೆ, ನಿಮಗೆ ಆ ಚಿತ್ರ ಮಬ್ಬಾಗಿ ಕಂಡಿರಬಹುದು. ಕಾರಣ ಸಿಂಪಲ್. ಸ್ಕ್ರೀನ್ ಮೇಲೆ ಹೊಗೆಯಾಡಿತ್ತು. ದ್ವೇಷದ ಹೊಗೆಯಲ್ಲ. ಬದಲಾಗಿ ಹೋಮದ ಹೊಗೆ. |
| |
|
|
|
|
|
|
|