ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಬಿಎಸ್‌ಎನ್‌ಎಲ್‌ನಿಂದ 700 ಉದ್ಯೋಗಿಗಳ ನೇಮಕ
ನವದೆಹಲಿ, ಸೋಮವಾರ, 1 ಡಿಸೆಂಬರ್ 2008   ( 12:57 IST )
ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಕಂಪೆನಿಗಳು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿರುವ ಸಂದರ್ಭದಲ್ಲಿ ,ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್ ಕಂಪೆನಿಗಳು 700 ವೃತ್ತಿಪರರನ್ನು ಕೆಲಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಿವೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ 300 ವ್ಯವಸ್ಥಾಪಕ ತರಬೇತುದಾರ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಎಂಟಿಎನ್‌ಎಲ್ ಕೂಡಾ 392 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಸಂಚಾರ ನಿಗಮದಲ್ಲಿ 3.5 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ದೆಹಲಿ ಮತ್ತು ಮುಂಬೈಯನ್ನು ಹೊರತುಪಡಿಸಿ ದೇಶದಾದ್ಯಂತ ಶಾಖೆಗಳನ್ನು ಹೊಂದಿದೆ.ಎಂಟಿಎನ್‌ಎಲ್ ಕೇವಲ ದೆಹಲಿ ಮತ್ತು ಮುಂಬೈನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ.

ತರಬೇತುದಾರರನ್ನು ಟೆಲಿಕಾಂ ಆಪರೇಶನ್‌, ಮಾರ್ಕೆಟಿಂಗ್ ,ಫೈನಾನ್ಸ್ ,ಹ್ಯೂಮನ್ ರಿಸೊರ್ಸ್, ಮತ್ತು ಐಟಿ ಕಾರ್ಯಗಳನ್ನು ನಿರ್ವಹಣೆಗಾಗಿ ತೆಗೆದುಕೊಳ್ಳಲಾಗುತ್ತಿದೆ.ಆದರೆ ಖಾಸಗಿ ಕಂಪೆನಿಗಳು ಸಂಪರ್ಕಜಾಲವನ್ನು ವಿಸ್ತರಿಸುತ್ತಿದ್ದರೂ ಕೇವಲ ಮಾರಾಟ ಹಾಗೂ ಮಾರುಕಟ್ಟೆ ನಿರ್ವಹಣೆಗೆ ಮಾತ್ರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.

(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉಗ್ರರ ದಾಳಿ: ಚಿನಿವಾರ ಪೇಟೆಗೆ12ಸಾ.ಕೋಟಿ ನಷ್ಟ
ಸೆನ್ಸೆಕ್ಸ್ ;ಚೇತರಿಕೆ ಕಂಡ ಶೇರುಪೇಟೆ
'ಭದ್ರತೆ ಮತ್ತು ಆತಿಥ್ಯ ಒಟ್ಟಾಗಿ ಹೋಗಲು ಸಾಧ್ಯವಿಲ್ಲ'
ಸುಝುಕಿ: 1,200 ನೌಕರರ ವಜಾಗೆ ಸಿದ್ದತೆ
ಟೆಲಿಕಾಂ: 2012ರ ವೇಳೆಗೆ 54 ಬಿಲಿಯನ್ ಡಾಲರ್ ಆದಾಯ
ಉಗ್ರರ ದಾಳಿ : ಐಟಿ ಕಂಪೆನಿಗಳಿಗೆ ವ್ಯಾಪಕ ಭದ್ರತೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...