ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಪ್ರಧಾನಿಗೆ ವಿತ್ತ ಖಾತೆ:ಕಂಪೆನಿಗಳ ಸ್ವಾಗತ
ನವದೆಹಲಿ, ಸೋಮವಾರ, 1 ಡಿಸೆಂಬರ್ 2008   ( 13:02 IST )
ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರನ್ನು ಗೃಹಸಚಿವರಾಗಿ ನೇಮಕ ಮಾಡಿ ವಿತ್ತ ಖಾತೆಯನ್ನು ಭಾರತದ ಆರ್ಥಿಕತೆಯಲ್ಲಿ ಸುಧಾರಣೆ ತಂದ ರೂವಾರಿ ಎಂದು ಖ್ಯಾತರಾದ ಪ್ರಧಾನಿ ಮನಮೋಹನ್ ಸಿಂಗ್ ವಹಿಸಿಕೊಂಡಿರುವುದಕ್ಕೆ ದೇಶದ ಕೈಗಾರಿಕೋದ್ಯಮ ಸಂಘಗಳು ಸ್ವಾಗತಿಸಿವೆ.

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ನೇತೃತ್ವದಲ್ಲಿ ಸಮಿತಿಯೊಂದು ರಚಿಸಿ ಶೇರುಪೇಟೆ ಕುಸಿತ ವಿದೇಶಿ ವಿನಿಮಯ ಇಳಿಕೆ ಕುಸಿತ ಕುರಿತಂತೆ ಆರ್ಥಿಕ ಸವಾಲುಗಳನ್ನು ಎದುರಿಸಲು ಪ್ರಧಾನಿ ಮನಮೋಹನ್ ಸಿಂಗ್ ನಿರ್ಧರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಹಣಕಾಸು ಇಲಾಖೆಗೆ ಒಳಪಡುವ ಬಡ್ಡಿ ದರ ಇಳಿಕೆ , ಮೂಲಸೌಕರ್ಯಗಳಲ್ಲಿ ಹೆಚ್ಚುತ್ತಿರುವ ವೆಚ್ಚಗಳ ಕುರಿತಂತೆ ನೇರ ಪಾತ್ರ ವಹಿಸಿದ್ದರು ಎಂದು ಫೆಟರೇಶನ್ ಆಫ್ ಇಂಡಿಯನ್ ಚೇಂಬರ್‌ ಆಫ್ ಕಾಮರ್ಸ್ ಅಧ್ಯಕ್ಷ ಅಮಿತ್ ಮಿತ್ರಾ ತಿಳಿಸಿದ್ದಾರೆ.

ಸಂಪುಟದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ವಿತ್ತ ಸಚಿವರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್‌ ಮತ್ತು ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಕೂಡಾ ಸೇವೆಯನ್ನು ಸಲ್ಲಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಡಾಲರ್ ಎದುರು ರೂಪಾಯಿ ಮೌಲ್ಯ ಸ್ಥಿರ
ಬಿಎಸ್‌ಎನ್‌ಎಲ್‌ನಿಂದ 700 ಉದ್ಯೋಗಿಗಳ ನೇಮಕ
ಉಗ್ರರ ದಾಳಿ: ಚಿನಿವಾರ ಪೇಟೆಗೆ12ಸಾ.ಕೋಟಿ ನಷ್ಟ
ಸೆನ್ಸೆಕ್ಸ್ ;ಚೇತರಿಕೆ ಕಂಡ ಶೇರುಪೇಟೆ
'ಭದ್ರತೆ ಮತ್ತು ಆತಿಥ್ಯ ಒಟ್ಟಾಗಿ ಹೋಗಲು ಸಾಧ್ಯವಿಲ್ಲ'
ಸುಝುಕಿ: 1,200 ನೌಕರರ ವಜಾಗೆ ಸಿದ್ದತೆ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...