ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಆರ್ಥಿಕತೆ ಮಾರ್ಗದರ್ಶನಕ್ಕೆ ಪ್ರಧಾನಿ ಸೂಕ್ತ:ಚಿದು
ನವದೆಹಲಿ, ಸೋಮವಾರ, 1 ಡಿಸೆಂಬರ್ 2008   ( 16:16 IST )
ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಶಿವರಾಜ್ ಪಾಟೀಲ್ ರಾಜೀನಾಮೆ ನೀಡಿದ್ದರಿಂದ ಕೇಂದ್ರ ಗೃಹಸಚಿವ ಸ್ಥಾನ ಅಲಂಕರಿಸಿದ ವಿತ್ತ ಸಚಿವ ಪಿ.ಚಿದಂಬರಂ ಆರ್ಥಿಕತೆಯ ಬಗ್ಗೆ ಮಾರ್ಗದರ್ಶನ ನೀಡಲು ಪ್ರಧಾನಿ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ವಿತ್ತ ಸಚಿವ ಖಾತೆಯನ್ನು ಪ್ರಧಾನಿ ಮನಮೋಹನ್ ಸಿಂಗ್ ತಮ್ಮ ಸುರ್ಪದಿಗೆ ತೆಗೆದುಕೊಂಡಿದ್ದು, ಪ್ರಧಾನಿ ಖ್ಯಾತ ಆರ್ಥಿಕ ತಜ್ಞರಾಗಿರುವುದರಿಂದ ದೇಶದ ಜನತೆಗೆ ಸೂಕ್ತ ಮಾರ್ಗದರ್ಶಿಯಾಗಬಲ್ಲರು ಎಂದು ಸಚಿವ ಚಿದಂಬರಂ ತಿಳಿಸಿದ್ದಾರೆ.

ಗೃಹ ಖಾತೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ನಿರ್ಧರಿಸಿದ್ದು ಹುದ್ದೆಯನ್ನು ವಹಿಸಿಕೊಳ್ಳುವಂತೆ ಆದೇಶಿಸಿದ್ದಾರೆ ಎಂದು ಗೃಹಖಾತೆಯನ್ನು ವಹಿಸಿಕೊಳ್ಳುತ್ತಿರುವ ಪಿ.ಚಿದಂಬರಂ ಹೇಳಿದ್ದಾರೆ.

ವಿತ್ತ ಸಚಿವರಾಗಿ ಕಳೆದ ನಾಲ್ಕು ವರ್ಷಗಳಿಂದ ಸಂಪೂರ್ಣ ತೃಪ್ತಿಯಿಂದ ಕಾರ್ಯನಿರ್ವಹಿಸಿದ್ದು, ಐದನೇ ವರ್ಷದಲ್ಲಿ ರಾಜಕೀಯ ಭವಿಷ್ಯ ಮತ್ತೊಂದು ತಿರುವು ಪಡೆದಿದೆ. ಇಂದು ಮಧ್ಯಾಹ್ನ ಗೃಹಸಚಿವ ಸ್ಥಾನವನ್ನು ಸ್ವೀಕರಿಸುವುದಾಗಿ ಚಿದಂಬರಂ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿತ್ತ ಸಚಿವಾಲಯದಲ್ಲಿನ ಕಾರ್ಯಗಳನ್ನು ಅಂತ್ಯಗೊಳಿಸಲಾಗಲಿಲ್ಲ. ಆದರೆ ಭಾರತದ ಆರ್ಥಿಕ ಅಭಿವೃದ್ಧಿ ದರ ಶೇ.7 ರಿಂದ ಶೇ 8 ವರೆಗೆ ಏರಿಕೆ ಕಾಣಲಿದೆ ಎಂದು ಸಚಿವ ಚಿದಂಬರಂ ವಿಶ್ವಾಸ ವ್ಯಕ್ತಪಡಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಾರುತಿ ಕಾರು ಮಾರಾಟದಲ್ಲಿ ಇಳಿಕೆ
ಡಿಸೆಂಬರ್‌ನಲ್ಲಿ ಮತ್ತಷ್ಟು ಬಡ್ಡಿ ದರ ಕಡಿತ
ಪ್ರಧಾನಿಗೆ ವಿತ್ತ ಖಾತೆ:ಕಂಪೆನಿಗಳ ಸ್ವಾಗತ
ಡಾಲರ್ ಎದುರು ರೂಪಾಯಿ ಮೌಲ್ಯ ಸ್ಥಿರ
ಬಿಎಸ್‌ಎನ್‌ಎಲ್‌ನಿಂದ 700 ಉದ್ಯೋಗಿಗಳ ನೇಮಕ
ಉಗ್ರರ ದಾಳಿ: ಚಿನಿವಾರ ಪೇಟೆಗೆ12ಸಾ.ಕೋಟಿ ನಷ್ಟ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...