|
| ಕಾರು, ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ |
| ನವದೆಹಲಿ, ಮಂಗಳವಾರ, 2 ಡಿಸೆಂಬರ್ 2008 ( 12:24 IST ) | |
ದೇಶದ ಅಟೋಮೊಬೈಲ್ ಉದ್ಯಮಕ್ಕೆ ಭಾರಿ ಸಂಕಷ್ಟದ ಸ್ಥಿತಿ ಎದುರಾಗಿದ್ದು, ಟಾಟಾ ಮೋಟಾರ್ಸ್, ಮಾರುತಿ ಮತ್ತು ಮಹೀಂದ್ರಾ ಆಂಡ್ ಮಹೀಂದ್ರಾ ಸೇರಿದಂತೆ ನವೆಂಬರ್ ತಿಂಗಳಲ್ಲಿ ಅನೇಕ ಕಂಪೆನಿಗಳ ವಾಹನ ಮಾರಾಟದಲ್ಲಿ ಕುಸಿತ ಕಂಡುಬಂದಿದೆ ಎಂದು ವಹಿವಾಟಿನ ಮೂಲಗಳು ತಿಳಿಸಿವೆ.
ದ್ವಿಚಕ್ರವಾಹನ ಉತ್ಪಾದಕ ಕಂಪೆನಿಗಳಲ್ಲಿ ಹೀರೊಹೊಂಡಾವನ್ನು ಹೊರತುಪಡಿಸಿ ಉಳಿದ ಕಂಪೆನಿಗಳ ವಾಹನಗಳ ಮಾರಾಟದಲ್ಲಿ ಭಾರಿ ಪ್ರಮಾಣದ ಕುಸಿತವಾಗಿದೆ.
ದೇಶದ ಕಾರು ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಝುಕಿ ನವೆಂಬರ್ ತಿಂಗಳ ಅವಧಿಯ ಮಾರಾಟದಲ್ಲಿ ಶೇ.27.4 ರಷ್ಟು ಕುಸಿತವಾಗಿದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ನವೆಂಬರ್ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಸಂಸ್ಥೆಯ ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ.12.22ರಷ್ಟು ಕುಸಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದು ಪ್ರಮುಖ ವಾಹನಗಳ ತಯಾರಿಕೆ ಕಂಪೆನಿಯಾದ ಮಹೀಂದ್ರಾ ಆಂಡ್ ಮಹೀಂದ್ರಾ, ನವೆಬಂರ್ ತಿಂಗಳ ವಾಹನಗಳ ಮಾರಾಟದಲ್ಲಿ ಶೇ.41.55 ರಷ್ಟು ವಾಹನಗಳ ಮಾರಾಟದಲ್ಲಿ ಕುಸಿತ ಕಂಡಿದೆ.
ಗ್ರಾಹಕರಿಕೆ ಆರ್ಥಿಕ ಸೌಲಭ್ಯ ಮತ್ತು ಬಡ್ಡಿ ದರ ಏರಿಕೆಯಿಂದಾಗಿ ಗ್ರಾಹಕರ ಕೊರತೆಯಿಂದಾಗಿ ದೇಶದ ಅಟೋಮೊಬೈಲ್ ಉದ್ಯಮ ವಾಹನಗಳ ಮಾರಾಟದ ಕೊರತೆಯನ್ನು ಎದುರಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|