ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಉಗ್ರರ ದಾಳಿ: ಮುಂಬೈ ಆರ್ಥಿಕತೆಗೆ ಧಕ್ಕೆಯಿಲ್ಲ
ವಾಷಿಂಗ್ಟನ್, ಮಂಗಳವಾರ, 2 ಡಿಸೆಂಬರ್ 2008   ( 13:11 IST )
ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ಉಗ್ರರು ದಾಳಿ ನಡೆಸಿ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರಲು ಪ್ರಯತ್ನಿಸಿದ್ದರೂ ದೇಶದ ಆರ್ಥಿಕತೆ ಸದೃಢವಾಗಿರುವುದರಿಂದ ಉಗ್ರರ ಸಂಚು ವಿಫಲವಾಗಲಿದೆ ಎಂದು ಯುನೈಟೆಡ್ ಸ್ಟೇಟ್ಸ್- ಇಂಡಿಯಾ ಬಿಸಿನೆಸ್ ಕೌನ್ಸಿಲ್ ಹೇಳಿಕೆ ನೀಡಿದೆ.

ಭಯೋತ್ಪಾದನೆಯಿಂದ ಭಾರತೀಯರಲ್ಲಿ ಹಾಗೂ ವಿದೇಶಿಯರಲ್ಲಿ ಆತಂಕ ಮೂಡಿಸಿ ಹೂಡಿಕೆದಾರರಲ್ಲಿ ಅನಗತ್ಯ ಭಯವನ್ನು ಸೃಷ್ಟಿಸಿ ದೇಶದ ಆರ್ಥಿಕತೆಯನ್ನು ನಾಶಪಡಿಸುವ ಹುನ್ನಾರ ಹೊಂದಿದ್ದಾರೆ ಎಂದು ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ.

ದೇಶದ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡುವ ಗುರಿಯನ್ನು ಭಯೋತ್ಪಾದಕರು ಹೊಂದಿದ್ದೆ ಆದಲ್ಲಿ ಖಂಡಿತವಾಗಿ ವಿಫಲವಾಗುತ್ತಾರೆ. ಅಮೆರಿಕ, ಮ್ಯಾಡ್ರಿಡ್ ಮತ್ತು ಲಂಡನ್‌ಗಳ ಮೇಲೆ ಉಗ್ರರ ದಾಳಿ ನಡೆದ ನಂತರವೂ ಆರ್ಥಿಕ ವ್ಯವಸ್ಥೆ ಬಲಿಷ್ಟವಾಗಿದೆ. ಅದರಂತೆ ಮುಂಬೈ ಕೂಡಾ ಆರ್ಥಿಕವಾಗಿ ಮತ್ತಷ್ಟು ಬಲಿಷ್ಟವಾಗಲಿದೆ ಎಂದು ಸಮಿತಿ ವಿಶ್ವಾಸ ವ್ಯಕ್ತಪಡಿಸಿದೆ.

ಆದರೆ ಭಯೋತ್ಪಾದಕರು ದೇಶದ ಏಕತೆಗೆ ಧಕ್ಕೆ ತರುವ ಗುರಿಗಳನ್ನು ಹೊಂದಿದ್ದಲ್ಲಿ ನಾವು ಎಚ್ಚರಿಕೆಯಿಂದ ಹಾಗೂ ಒಗ್ಗಟ್ಟಿನಿಂದ ಭಯೋತ್ಪಾದಕರನ್ನು ಎದುರಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಎಸ್‌ಬಿಐಗೆ ಬೆಸ್ಟ್ ಬ್ಯಾಂಕ್ ಪ್ರಶಸ್ತಿಯ ಗರಿ
ಸೆನ್ಸೆಕ್ಸ್: ಕುಸಿತದೊದಿಗೆ ವಹಿವಾಟು ಆರಂಭ
ಕಾರು, ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ
ಏಜೆಂಟ್‌ರಿಂದ ಜೆಟ್ ಟಿಕೆಟ್ ಮಾರಾಟ ಸ್ಥಗಿತ:ರಾಯ್
ಆರ್ಥಿಕತೆ ಮಾರ್ಗದರ್ಶನಕ್ಕೆ ಪ್ರಧಾನಿ ಸೂಕ್ತ:ಚಿದು
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...