|
| ಆರ್ಥಿಕ ಕುಸಿತದ ಮಧ್ಯೆ ಶೇ.7.5ರಷ್ಟು ಅಭಿವೃದ್ಧಿ |
| ನವದೆಹಲಿ, ಮಂಗಳವಾರ, 2 ಡಿಸೆಂಬರ್ 2008 ( 13:23 IST ) | |
ವಿದೇಶಗಳಲ್ಲಿ ಎದುರಾಗಿರುವ ಕಠಿಣ ಆರ್ಥಿಕ ಸ್ಥಿತಿ ಮತ್ತು ದೇಶದ ಆರ್ಥಿಕತೆ ಕುಸಿತದ ಮಧ್ಯೆಯು ಆರ್ಥಿಕ ಅಭಿವೃದ್ಧಿ ದರ ಶೇ.7.5ರ ಹತ್ತಿರದಲ್ಲಿ ಕಂಡುಬರಲಿದೆ ಎಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ತ್ರೈಮಾಸಿಕದ ವರದಿಯಂತೆ ದೇಶದ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ.7.6ರಷ್ಟಿದ್ದು, ಮುಂಬರುವ ವರ್ಷದಲ್ಲಿ ಶೇ.7.5ರಷ್ಟಾಗಲಿದೆ ಎಂದು ಪ್ರಧಾನಿ ವಿಧಾನಸಭೆಯ ಚುನಾವಣೆಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ತಿಳಿಸಿದರು.
ಅಮೆರಿಕ ಮತ್ತು ಯುರೋಪ್ ರಾಷ್ಟ್ರಗಳಲ್ಲಿ ಆರಂಭವಾದ ಆರ್ಥಿಕ ಕುಸಿತ, ವಿಸ್ತರಿತಗೊಂಡು ಜಾಗತಿಕವಾಗಿ ಎಲ್ಲ ರಾಷ್ಟ್ರಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿದ್ದು,ಭಾರತ ಇತರ ದೇಶಗಳಿಂದ ಹೊರತಾಗಿಲ್ಲ ಎಂದು ಹೇಳಿದ್ದಾರೆ.
ಕೆಲ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಆರ್ಥಿಕ ಅಭಿವೃದ್ಧಿ ದರ ಸಂಪೂರ್ಣ ಇಳಿಕೆಯಾಗಿ ಆರ್ಥಿಕ ಬಿಕ್ಕಟಿಟನ ಕೋಲಾಹಲ ಸೃಷ್ಟಿಸಿದೆ. ದೇಶದ ಆರ್ಥಿಕ ಕುಸಿತವನ್ನು ಎದುರಿಸಲು ಸರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಪ್ರಧಾನಿ ಜನತೆಗೆ ಮನವಿ ಮಾಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|