|
| ಪಾಕಿಸ್ತಾನ: ಸ್ಫರ್ಧೆಗೆ ಪಿಎಂಎಲ್-ಎನ್ ಸಿದ್ಧ |
| ಇಸ್ಲಾಮಾಬಾದ್ (ಏಜೆನ್ಸಿ), 31 ಡಿಸೆಂಬರ್ 2007 ( 09:42 IST ) | |
ಪಾಕ್ ಸೇನಾಡಳಿತ ಮತ್ತು ಸರ್ವಾಧಿಕಾರಿ ದೋರಣೆ ಖಂಡಿಸಿ ಚುನಾವಣೆ ಬಹಿಷ್ಕರಿಸುವುದಾಗಿ ಬೆದರಿಕೆ ಒಡ್ಡಿದ್ದ ಪಾಕಿಸ್ತಾನದ ಪ್ರಮುಖ ವಿರೋಧ ಪಕ್ಷವಾದ ಪಿಎಂಎಲ್-ಎನ್, ತನ್ನ ಹೇಳಿಕೆಯನ್ನು ಬದಲಾಯಿಸಿ ಚುನಾವಣೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದೆ.
ಪಾಕಿಸ್ತಾನ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೊ ಹತ್ಯೆಯ ನಂತರ ಅರಾಜಕತೆ ಉಂಟಾಗಿರುವ ಹಿನ್ನಲೆಯಲ್ಲಿ, ಜನವರಿ 8ರ ಸಾರ್ವತ್ರಿಕ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಹೇಳಿದ್ದ ಇನ್ನೋರ್ವ ಮಾಜಿ ಪ್ರಧಾನಿ ನವಾಜ್ ಶರೀಫ್ ನೇತೃತ್ವದ ಪಿಎಂಎಲ್-ಎನ್ ಪಕ್ಷ ಇದೀಗ ತನ್ನ ಹೇಳಿಕೆಯನ್ನು ಬದಲಾಯಿಸಿದ್ದು, ಚುನಾವಣೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.
"ನಾವು ಚುನಾವಣೆಯನ್ನು ಬಹಿಷ್ಕರಿಸಬೇಕೆಂದಿದ್ದೇವು. ಆದರೆ, ತಮ್ಮ ಮಿತ್ರ ಪಕ್ಷವಾದ ಪಿಪಿಪಿ ಚುನಾವಣೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ, ತಮಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದ್ದರಿಂದ ತಾವು ಈ ಕ್ರಮಕ್ಕೆ ಮುಂದಾಗಿದ್ದೇವೆ" ಎಂದು ಪಿಎಂಎಲ್-ಎನ್ ನಾಯಕ ಸಿದ್ಧಕಿ ಅಲ್-ಫರೂಕ್ ತಿಳಿಸಿದ್ದಾರೆ.
ಜನವರಿ 8ರ ಸಾರ್ವತ್ರಿಕ ಚುನಾವಣೆಯಲ್ಲಿ ಪಾಲ್ಗೊಳ್ಳುವ ಕುರಿತು 2008ರ ಜನವರಿ 1ರಂದು ನಡೆಯುವ ಪಕ್ಷದ ಉನ್ನತ ಮಟ್ಟದ ಸಭೆಯ ನಂತರ ಅಧಿಕೃತವಾಗಿ ಹೇಳಿಕೆ ಹೊರಬಿಳಲಿದೆ ಎಂದವರು ಹೇಳಿದರು.
ಶನಿವಾರ್ ಆಸಿಫ್ ಅಲಿ ಜರ್ದಾರಿ ಅವರನ್ನು ಬೇಟಿ ಮಾಡಿ ನಮ್ಮ ನಾಯಕ ನವಾಜ್ ಶರೀಫ್ ಅವರು ಸುಧೀರ್ಘ ಮಾತುಕತೆ ನಡೆಸಿದ್ದು, ಪಾಕಿಸ್ತಾನದಲ್ಲಿ ಸರ್ವಾಧಿಕಾರವನ್ನು ಕಿತ್ತೊಗೆದು, ಪ್ರಜಾಪ್ರಭುತ್ವ ಮರುಸ್ಥಾಪನೆಗೆ ಶ್ರಮಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಕೈಜೋಡಿಸಲಿವೆ ಎಂದವರು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|