|
| ಮುಷ್‌ರಫ್‌ರ ವಿರುದ್ಧ ಕಿಡಿ ಕಾರಿದ ಶರೀಫ್ |
| ಲಾಹೋರ್ (ಏಜೆನ್ಸಿ), ಸೋಮವಾರ, 31 ಡಿಸೆಂಬರ್ 2007 ( 18:41 IST ) | |
ಪಾಕ್ ಅಧ್ಯಕ್ಷ ಪರ್ವೇಜ್ ಮುಷರಫ್‌ರನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಪ್ರಧಾನಿ ನವಾಜ್ ಶರೀಫ್, ತಮ್ಮ ಪಕ್ಷ ಪಿಎಂಎಲ್-ಎನ್ ಜನವರಿ 2008ರಲ್ಲಿನ ನಿಗದಿತ ದಿನಾಂಕದಲ್ಲಿ ನಡೆಯಲಿರುವ ಸಾವ್ರತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದು ಎಂದು ಹೇಳಿದ್ದಾರೆ.
ಪಾಕ್ ಅಧ್ಯಕ್ಷ ಪರ್ವೇಜ್ ಮುಷರಫ್‌ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಅವರು, ಮುಷರಫ್ ಅಡಿ ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ಅಸಾಧ್ಯ ಎಂದು ಹೇಳಿದ್ದಾರೆ.
ಮುಷರಫ್ ಚುನಾವಣೆಯ ಮುಂದೂಡುವಿಕೆಯನ್ನು ಇಚ್ಚಿಸಿದ್ದಾರೆ ಎಂದು ಆರೋಪಿಸಿದ ಶರೀಫ್, ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವ ಇಲ್ಲದ ಕಾರಣ ಭಯದ ವಾತಾವರಣ ಇದೆ ಎಂದು ತಿಳಿಸಿದರು.
ಮುಷರಫ್ ಮತ್ತು ಪಾಕಿಸ್ತಾನ ಒಟ್ಟಾಗಿ ಹೋಗಲು ಸಾಧ್ಯವಿಲ್ಲ ಎಂಬುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದ್ದು, ಮುಷರಫ್ ಒಂದು ಪರಿಹಾರವಲ್ಲ. ವಾಸ್ತವವಾಗಿ ಅವರು ಒಂದು ಸಮಸ್ಯೆ ಎಂದು ಖಾರವಾಗಿ ದೂಷಿಸಿದ್ದಾರೆ.
ಮುಷರಫ್‌ರನ್ನು ಏಕವ್ಯಕ್ತಿ ವಿಪತ್ತು ಎಂದು ಕರೆದಿರುವ ಶರೀಫ್ ಅವರ ರಾಜಿನಾಮೆಗೆ ಆಗ್ರಹಿಸಿದ್ದಾರೆ ಮತ್ತು ಈ ಮುಂಚಿನಂತೆ ಸಂವಿಧಾನ ಹಾಗೂ ನ್ಯಾಯಾಂಗವನ್ನು ಪುನಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆನಜೀರ್ ಭುಟ್ಟೋ ಹತ್ಯೆ ಕುರಿತಾಗಿ ಮಾತನಾಡಿದ ಶರೀಫ್, ಅವರ ಸಾವಿಗೆ ಸಂಬಂಧಿಸಿದಂತೆ ಈಗಲೇ ಯಾರನ್ನೂ ದೂಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾಪ್ರಭುತ್ವದ ಉದ್ದೇಶಕ್ಕಾಗಿ ತಾನು ಬೆನಜೀರ್ ಭುಟ್ಟೋರ ಪಕ್ಷದ ಜತೆ ಕೈಮಿಲಾಯಿಸಲು ಸಿದ್ಧನಿದ್ದೇನೆ ಎಂದು ಹೇಳಿದ ಮಾಜಿ ಪ್ರಧಾನಿ, ಸರ್ವಧಿಕಾರಿ ವಿರುದ್ಧ ಹೋರಾಡಲು ಒಂದು ವೇಳೆ ಪಿಎಂಎಲ್-ಎನ್ ಹಾಗೂ ಬೆನಜೀರ್ ಪಕ್ಷ ಒಂದು ಗೊಡಿದರೆ ಯಾವುದೇ ಹಾನಿಯಿಲ್ಲ ಎಂದು ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|