|
| ಪಾಕ್ ಸಮ್ಮಿಶ್ರ ಕೂಟದ ನಾಯಕರ ಸಭೆ |
| ಇಸ್ಲಾಮಾಬಾದ್, ಬುಧವಾರ, 23 ಜುಲೈ 2008 ( 15:14 IST ) | |
ಪಾಕಿಸ್ತಾನ ಪೀಪಲ್ಸ್ ಪಕ್ಷ ನೇತೃತ್ವದ ಸಮ್ಮಿಶ್ರ ಕೂಟದ ಉನ್ನತ ನಾಯಕರು ಬುಧವಾರ ಇಸ್ಲಾಮಾಬಾದ್‌ನಲ್ಲಿ ಭೇಟಿ ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ನೂತನ ಕಾರ್ಯತಂತ್ರವನ್ನು ರೂಪಿಸಲು ಮತ್ತು ದೇಶವನ್ನು ಬಾಧಿಸುತ್ತಿರುವ ಇತರೆ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಈ ಭೇಟಿ ನಡೆದಿದೆ.
ಅಧ್ಯಕ್ಷ ಪರ್ವೇಜ್ ಮುಷರಫ್ ಕಳೆದ ವರ್ಷ ವಜಾಮಾಡಿದ ನ್ಯಾಯಾಧೀಶರ ಮರುನೇಮಕವೂ ಚರ್ಚೆಯಲ್ಲಿ ಪ್ರಸ್ತಾಪವಾಗಲಿದೆ. ಪಿಎಂಎಲ್-ಎನ್ ಮುಖ್ಯಸ್ಥ ನವಾಜ್ ಷರೀಫ್ ಪ್ರಸಕ್ತ ಲಂಡನ್‌ನಲ್ಲಿದ್ದು, ಪ್ರಧಾನಮಂತ್ರಿ ಯೂಸುಫ್ ರಾಜಾ ಗಿಲಾನಿ ಅಧ್ಯಕ್ಷತೆ ವಹಿಸಿದ್ದ ನಿರ್ಣಾಯಕ ಸಭೆಯಲ್ಲಿ ಶರೀಫ್ ಸೋದರ ಪಂಜಾಬ್ ಮುಖ್ಯಮಂತ್ರಿ ಶಾಬಾಜ್ ಷರೀಫ್ ಪಿಎಂಎಲ್-ಎನ್ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ.
ಪಿಪಿಪಿ ಸಹ ಅಧ್ಯಕ್ಷ ಅಸೀಫ್ ಅಲಿ ಜರ್ದಾರಿ, ಜಮೈತ್ ಉಲೇಮೆ ಇಸ್ಲಾಂ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಮತ್ತು ಅವಾಮಿ ನ್ಯಾಷನಲ್ ಪಕ್ಷದ ಮುಖ್ಯಸ್ಥ ಅಫ್ಸಂದ್ಯಾರ್ ವಾಲಿ ಖಾನ್ ಸಭೆಯಲ್ಲಿ ಭಾಗವಹಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|