|
|
ಚೆಚೆನ್ಯಾ ಭೂಕಂಪ: ಕನಿಷ್ಠ 13 ಸಾವು |
| ಮಾಸ್ಕೋ, ಭಾನುವಾರ, 12 ಅಕ್ಟೋಬರ್ 2008 ( 11:58 IST ) | |
ರಷ್ಯಾದ ಚೆಚೆನ್ಯಾ ಕೇಂದ್ರಿತವಾಗಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 13 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಸುಮಾರು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನದಂದು ಸಂಭವಿಸಿದ ಈ ಭೂಕಂಪದಿಂದಾಗಿ ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್ ಸರಬರಾಜು ಮತ್ತು ಸಂವಹನ ವ್ಯವಸ್ಥೆಗಳಿಗೆ ತೀವ್ರತರದ ಹಾನಿ ಉಂಟಾಗಿದೆ ಎಂದು ರಷ್ಯಾದ ಸುದ್ಧಿ ಏಜೆನ್ಸಿ ವರದಿ ಮಾಡಿದೆ.
ರಿಕ್ಟರ್ ಮಾಪಕದಲ್ಲಿ 6.3ರಲ್ಲಿದ್ದ ಈ ಭೂಕಂಪ ರಷ್ಯಾದ ಉತ್ತರ ಕೌಕಸಸ್‌ನ 5 ಪ್ರದೇಶಗಳಲ್ಲಿ ಹಾಗೂ ನೆರೆ ರಾಷ್ಟ್ರ ಜಾರ್ಜಿಯಾ ಮತ್ತು ಅಮೆರಿಕದಲ್ಲೂ ಅನುಭವವಾಗಿದೆ ಎಂದು ವರದಿಯಾಗಿದೆ.
ಚೆಚೆನ್ಯಾದಾದ್ಯಂತ ರಸ್ತೆಗಳು ಈ ಭೂಕಂಪನದಿಂದ ತೀವ್ರ ಹಾನಿಗೊಳಗಾಗಿವೆ ಎಂದು ವಲಯದ ಉಪಸಾರಿಗೆ ಸಚಿವ ಯಖ ಮಖ್ಮಟ್ಕಡ್ಜೀವಾ ತಿಳಿಸಿದ್ದಾರೆ.
ಪೂರ್ವ ಚೆಚೆನ್ಯಾದಲ್ಲಿನ ಗುಡೆರ್ಮೆಸ್, ಸ್ಹಾಲಿ ಮತ್ತು ಕುರ್ಚಲಾಯ್ ಜಿಲ್ಲೆಗಳಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿ ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|