|
| ಬ್ರಿಟಿಷ್ ಏರ್‌ವೇಸ್ ವಿಮಾನ ತುರ್ತು ಭೂಸ್ಪರ್ಶ |
| ಲಂಡನ್, ಸೋಮವಾರ, 13 ಅಕ್ಟೋಬರ್ 2008 ( 12:35 IST ) | |
225 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ, ದೆಹಲಿಗೆ ಆಗಮಿಸುತ್ತಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನದ ಮನರಂಜನೆ ವ್ಯವಸ್ಥೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದ ಭಾನುವಾರ ಜರ್ಮನಿ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಕಾಕ್‌ಪಿಟ್ ಅಲಾರ್ಮ್ ಮೂಲಕ ಬೋಯಿಂಗ್ 777ರ ಪೈಲಟ್‌ಗೆ ಎಚ್ಚರಿಸಿದ ಬಳಿಕ ವಿಮಾನವನ್ನು ಬರ್ಲಿನ್ ಆಗ್ನೇಯಕ್ಕಿರುವ ಸ್ಕೋಯೆನ್‌ಫೆಲ್ಡ್ ವಿಮಾನನಿಲ್ದಾಣಕ್ಕೆ ತಿರುಗಿಸಲಾಯಿತು.
ಬೆಳಿಗ್ಗೆ ಲಂಡನ್ ಹೀಥ್ರೋ ವಿಮಾನನಿಲ್ದಾಣವನ್ನು ಬಿಟ್ಟ ಬ್ರಿಟಿಷ್ ಏರ್‌ವೇಸ್ ವಿಮಾನವು ಪುನಃ ಲಂಡನ್‌ಗೆ ಹಿಂತುರಿಗಿದ್ದು, ದೆಹಲಿಗೆ ಭಾನುವಾರ ಸಂಜೆ ಪ್ರಯಾಣಬೆಳೆಸಿತು. ವಿಮಾನವು ಜರ್ಮನಿ ವಿಮಾನನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ವಕ್ತಾರ ತಿಳಿಸಿದರು.
ವಿಮಾನವು ಮೇಲೆ ಹಾರುತ್ತಿದ್ದಂತೆ ಎಕಾನಮಿ ಕ್ಲಾಸ್ ಸೀಟಿನ ಹಿಂಭಾಗದಲ್ಲಿರುವ ಟೆಲಿವಿಷನ್ ಪರದೆಯಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಬದಲಿಸಲಾಯಿತು ಎಂದು ಅವರು ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|