|
| ಮುಷರಫ್ ವಿರುದ್ಧ ಸಂಸತ್ ವಿಚಾರಣೆಗೆ ಆಗ್ರಹ |
| ಲಾಹೋರ್, 13 ಅಕ್ಟೋಬರ್ 2008 ( 12:51 IST ) | |
ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ಅವರ 9 ವರ್ಷಗಳ ಆಡಳಿತಾವಧಿಯಲ್ಲಿ ಕೈಗೊಂಡ ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಬೇಕೆಂದು ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಭಾನುವಾರ ಪುನರುಚ್ಚರಿಸಿದ್ದಾರೆ.
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಅಮೆರಿಕದ ಜತೆ ಮಾಡಿಕೊಂಡ ಒಪ್ಪಂದಗಳನ್ನು ಬಹಿರಂಗಪಡಿಸುವ ಉದ್ದೇಶಕ್ಕಾಗಿ ಅವರನ್ನು ಸಂಸತ್ತಿಗೆ ಕರೆಸಬೇಕೆಂದು ಶರೀಫ್ ಹೇಳಿದರು. ತಮ್ಮ ಸರ್ಕಾರವನ್ನು ಮುಷರಫ್ ಮಿಲಿಟರಿ ಕ್ರಾಂತಿಯ ಮೂಲಕ ಉರುಳಿಸಿದ ನೆನಪಿಗಾಗಿ ಲಾಹೋರ್ ಹೊರವಲಯದ ರೈವಂಡ್‌ನ ಎಸ್ಟೇಟ್‌ವೊಂದರ ಸಮಾರಂಭವೊಂದರಲ್ಲಿ ಷರೀಫ್ ಮಾತನಾಡುತ್ತಿದ್ದರು.
ತಮ್ಮ ಆಡಳಿತಾವಧಿಯಲ್ಲಿ ಎಷ್ಟು ಮಂದಿ ಭಯೋತ್ಪಾದಕರನ್ನು ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹಸ್ತಾಂತರಿಸಿದ್ದಾರೆಂಬುದನ್ನು ಮಾಜಿ ಮಿಲಿಟರಿ ಆಡಳಿತಗಾರ ಬಾಯಿಬಿಡಬೇಕು ಎಂದು ಷರೀಫ್ ಹೇಳುತ್ತಾ, ಮುಷರಫ್ ಕ್ರಮಗಳಿಗೆ ವಿಚಾರಣೆ ಎದುರಿಸಬೇಕೆಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|