|
| ಉಗ್ರರ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ-ಆಸಿಫ್ |
| ಕರಾಚಿ, ಸೋಮವಾರ, 1 ಡಿಸೆಂಬರ್ 2008 ( 16:16 IST ) | |
ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿಲ್ಲ ಎಂದು ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹೇಳಿದ್ದಾರೆ.
ಕಳೆದ ವರ್ಷ ಉಗ್ರರ ಗುಂಡಿಗೆ ಬಲಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಬೇನಜಿರ್ ಭುಟ್ಟೋ ಅವರ ಪತಿ ಹಾಗೂ ಪಾಕ್ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮಾತನಾಡಿ ಸ್ವಲ್ಪ ಎಚ್ಚರ ತಪ್ಪಿದಲ್ಲಿ ಉಭಯ ದೇಶಗಳ ಪರಮಾಣು ಯುದ್ದಕ್ಕೆ ಆಸ್ಪದ ನೀಡಿದಂತಾಗುತ್ತದೆ. ನಾವು ಕೂಡಾ ಲಷ್ಕರ್ ಏ-ತೊಯಿಬಾ ಉಗ್ರರ ವಿರುದ್ಧ ಹೋರಾಡುತ್ತಿದ್ದೇವೆ ಎನ್ನುವುದು ನೆನಪಿರಲಿ ಎಂದು ಟಿ.ವಿ.ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾವು ಸಂಕಷ್ಟ ಸಮಯದಲ್ಲಿದ್ದು, ಕಳೆದ ಎರಡು ಬಾರಿ ಕೂಡಾ ಯುದ್ದವನ್ನು ಎದುರಿಸಿದ್ದೇವೆ.ಅಮೆರಿಕದ ವರ್ಲ್ಡ್ ಟ್ರೆಡ್ ಸೆಂಟರ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಇರಾಕ್ ಯುದ್ದ ಆರಂಭವಾಯಿತು ಎಂದು ಜರ್ದಾರಿ ತಿಳಿಸಿದ್ದಾರೆ.
ಉಗ್ರರಿಂದ ಮುಂಬರುವ ದಿನಗಳಲ್ಲಿ ದಾಳಿ ನಡೆಯುವ ಸಾಧ್ಯತೆಗಳಿರುವುದರಿಂದ ಭಯೋತ್ಪಾದನೆಯ ವಿರುದ್ಧ ಒಂದಾಗಿ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|