ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಭಾರತ ಭೇಟಿಯ ನಂತರ ಇಸ್ಲಾಮಾಬಾದ್‌ಗೆ ರೈಸ್?
ಲಂಡನ್, ಮಂಗಳವಾರ, 2 ಡಿಸೆಂಬರ್ 2008   ( 16:13 IST )
ಮುಂಬೈ ದಾಳಿಯ ಹಿನ್ನೆಲೆಯಲ್ಲಿ ಬುಧವಾರದಂದು ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಕಾಂಡೋಲೀಝಾ ರೈಸ್ ನಂತರ ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ರಾಯಭಾರಿ ಕಚೇರಿಯ ಮೂಲಗಳು ತಿಳಿಸಿವೆ.

ಭಾರತಕ್ಕೆ ರೈಸ್ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ವಾಷಿಂಗ್ಟನ್‌ನಲ್ಲಿರುವ ಪಾಕಿಸ್ತಾನ ರಾಯಭಾರಿ ಅಧಿಕಾರಿಗಳು ಅಧ್ಯಕ್ಷ ಅಡಳಿತಕ್ಕೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕ ದಾಳಿಯ ಕುರಿತಂತೆ ಭಾರತದ ನಾಯಕರ ಜೊತೆ ಮಾತುಕತೆ ನಡೆಸಿದ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಯಭಾರಿ ಮೂಲಗಳು ತಿಳಿಸಿವೆ. ಆದರೆ ವಾಷಿಂಗ್ಟನ್‌ ಕಚೇರಿಯಿಂದಾಗಲಿ ಅಥವಾ ಇಸ್ಲಾಮಾಬಾದ್‌ನಿಂದಾಗಲಿ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಲಂಡನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈಸ್, ಉಭಯ ದೇಶಗಳು ಪರಸ್ಪರ ಆರೋಪ ಪ್ರತ್ಯರೋಪಗಳಲ್ಲಿ ತೊಡಗಿದ್ದು ,ಇದರಿಂದಾಗಿ ಪರಿಸ್ಥಿತಿ ಉದ್ರಿಕ್ತತೆಗೆ ತೆರಳುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪಾಕ್ ಸೇನೆ ಉಗ್ರರನ್ನು ಸದೆಬಡೆಯಲಿ:ನ್ಯಾಟೋ
ಪ್ರಜಾಪ್ರಭುತ್ವ ಬಲವರ್ಧನೆಗೆ ಮುಷರಫ್ ಒತ್ತಾಯ
ಭಾರತ ಪುರಾವೆ ಒದಗಿಸಿದಲ್ಲಿ ಕಠಿಣ ಕ್ರಮ: ಖುರೇಶಿ
ಉಗ್ರರ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ-ಆಸಿಫ್
ಅರಬ್‌ದೇಶಗಳೊಂದಿಗೆ ಪರಮಾಣು ಘಟಕ:ಇರಾನ್
ನೈಜೆರಿಯಾ ಕೋಮಗಲಭೆಗೆ 400 ಮಂದಿ ಸಾವು
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...