|
| ಮಾದಕವಸ್ತು ಸಾಗಣೆ: ಇರಾನ್ನಲ್ಲಿ ಗಲ್ಲುಶಿಕ್ಷೆ |
| ಟೆಹರಾನ್, ಮಂಗಳವಾರ, 19 ಮೇ 2009 ( 18:03 IST ) | |
ಇರಾನ್ ನೈರುತ್ಯ ನಗರ ಡೆಜ್ಫುಲ್ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪದ ಮೇಲೆ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಗಲ್ಲಿಗೇರಿಸಲಾಗಿದೆ ಎಂದು ಕಯಾನ್ ಸುದ್ದಿಪತ್ರಿಕೆ ವರದಿಮಾಡಿದೆ. ಅಹ್ಮದ್ ಎಂಬ ವ್ಯಕ್ತಿ 23 ಕಿಲೋಗ್ರಾಂ(50 ಪೌಂಡ್) ಹೆರಾಯಿನ್ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದು ಅವನಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿತ್ತು.
ಇರಾನ್ನಲ್ಲಿ ಮಾದಕವಸ್ತು ಕಳ್ಳಸಾಗಣೆಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತಿದ್ದು, ಇಲ್ಲಿಯವರೆಗೆ ವಿವಿಧ ಅಪರಾಧಗಳಿಗೆ ತಪ್ಪಿತಸ್ಥರಾದ ಸುಮಾರು 111 ಜನರಿಗೆ ಈ ವರ್ಷ ಗಲ್ಲುಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ 246 ಜನರಿಗೆಮರಣದಂಡನೆ ಜಾರಿ ಮಾಡಲಾಗಿದೆ.
2007ರಲ್ಲಿ ಯಾವುದೇ ರಾಷ್ಟ್ರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಇರಾನ್ ಮರಣದಂಡನೆ ಶಿಕ್ಷೆ ವಿಧಿಸಿದ್ದು, 335ಜನರನ್ನು ನೇಣಿನ ಕುಣಿಕೆಗೆ ಒಡ್ಡಿದೆಯೆಂದು ಮಾನವ ಹಕ್ಕು ಸಂಘಟನೆ ಅಮ್ನೆಸ್ಟಿ ಇಂಟರ್ನ್ಯಾಷನಲ್ ತಿಳಿಸಿದೆ.
| | (ಮೂಲ - ವೆಬ್ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|