|
| ಕಾಂಗ್ರೆಸ್, ಬಿಜೆಪಿಗೆ ಮಾಯಾವತಿ ತರಾಟೆ |
| ಚೆನ್ನೈ (ಏಜೆನ್ಸಿ), ಸೋಮವಾರ, 31 ಡಿಸೆಂಬರ್ 2007 ( 13:02 IST ) | |
ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ 'ನಿರ್ಲಕ್ಷ್ಯಿಸುತ್ತಿವೆ' ಎಂದು ತರಾಟೆಗೆ ತೆಗೆದುಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ, ಬಿಎಸ್‌ಪಿಯು ಈ ಎರಡು ಪಕ್ಷಗಳಿಗೆ ಪರ್ಯಾಯ ಎಂದು ಹೇಳಿದ್ದಾರೆ.
ರಾಷ್ಟ್ರವು ಸ್ವತಂತ್ರಗೊಂಡು 60 ವರ್ಷಗಳು ಸಂದಿದ್ದು, ಕಾಂಗ್ರೆಸ್, ಬಿಜೆಪಿ, ಮೈತ್ರಿಕೂಟಗಳು ಮತ್ತು ಇತರ ಪ್ರಾದೇಶಿಕ ಪಕ್ಷಗಳು ರಾಷ್ಟ್ರವನ್ನು ಆಳಿವೆ. ಆದರೆ ಇವುಗಳು ದಮನಕ್ಕೊಳಗಾದ, ದಲಿತ ಮತ್ತು ಆರ್ಥಿಕವಾಗಿ ಹಿಂದುಳಿದವರಿಗಾಗಿ ಏನೂ ಮಾಡಿಲ್ಲ ಎಂದು ಎಂದು ಕಿಡಿ ಕಾರಿದರು. ಅವರು ಚೆನ್ನೈನಲ್ಲಿ ಭಾನುವಾರ ರಾತ್ರಿ ಪಕ್ಷದ ಭ್ರಾತೃತ್ವ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು.
ಹಣದುಬ್ಬರುವು ಏರುತ್ತಲೇ ಹೋಗುತ್ತಿದ್ದು, ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆಯ ಮೇಲೆ ಪರಿಣಾಮ ಬೀರಿದೆ ಎಂದು ಮಾಯಾವತಿ ಬೆಟ್ಟು ಮಾಡಿದರು. ಇದಕ್ಕೆ ಕಾರಣ ಕಾಂಗ್ರೆಸ್ ಅಥವಾ ಬಿಜೆಪಿಯ ಆಡಳಿತ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಎಸ್‌ಪಿ ಮಾತ್ರ ಜನತೆಯ ಕಾಳಜಿ ವಹಿಸಬಲ್ಲುದು ಎಂದು ಹೇಳಿದರು.
ಈ ಪಕ್ಷಗಳು ವಾಣಿಜ್ಯೋದ್ಯಮಿಗಳು ಮತ್ತು ಶ್ರೀಮಂತ ವ್ಯಕ್ತಿಗಳ ಹಣದ ಬೆಂಬಲದಿಂದ ಅಧಿಕಾರಕ್ಕೆ ಬಂದಿವೆ. ಹಾಗಾಗಿ ನೀತಿ-ನಿಯಮಗಳು ಅವರಿಗೆ ಲಾಭದಾಯಕವಾಗಿರುತ್ತವೆಯೇ ವಿನಹ ದುರ್ಬಲ ವರ್ಗದವರ ಪರವಾಗಿ ಅಲ್ಲ ಎಂದು ಅವರು ಭಾರೀ ಜನಸ್ತೋಮವನ್ನುದ್ದೇಶಿಸಿ ಮಾತನಾಡುತ್ತಾ ನುಡಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|