|
| ಕಂದಮಾಲ್‌ಗೆ ಇಂದು ಶಿವರಾಜ್ ಭೇಟಿ |
| ಭುವನೇಶ್ವರ್ (ಏಜೆನ್ಸಿ), 2 ಜನವರಿ 2008 ( 08:58 IST ) | |
ಕೋಮು ದಳ್ಳುರಿಗೆ ಸಿಕ್ಕು ನಲುಗಿ ಹೋಗಿರುವ ಒರಿಸ್ಸಾ ರಾಜ್ಯದ ಕಂದಮಾಲ್‌ಗೆ, ಬುಧವಾರ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಭೇಟಿ ನೀಡಿ, ಪರಸ್ಥಿತಿಯನ್ನು ಖುದ್ದು ಅವಲೋಕಿಸಲಿದ್ದಾರೆ.
ಈ ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಕ್ರೈಸ್ತ ಸಮುದಾಯದ ಮೇಲೆ ಮತ್ತು ಅವರ ಸಂಸ್ಥೆಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿರುವ ಹಿನ್ನಲೆಯಲ್ಲಿ, ಪರಸ್ಥಿತಿಯ ಸ್ಪಷ್ಟ ಚಿತ್ರಣ ಪಡೆಯಲು ಶಿವರಾಜ್ ಅವರು ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ತೆರಳಲಿದ್ದಾರೆಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ಶಿವರಾಜ್ ಅವರ ಭೇಟಿ, ಒರಿಸ್ಸಾದಲ್ಲೀಗ ಭಯಭೀತರಾಗಿ ಜೀವನ ಸಾಗಿಸುತ್ತಿರುವ ಕ್ರೈಸ್ತ ಸಮುದಾಯದವರಿಗೆ ಸ್ವಲ್ಪಮಟ್ಟಿನ ನೆಮ್ಮದಿ ತರಲಿದೆ.
ಈ ಮಧ್ಯೆ, ಕ್ರೈಸ್ತರ ಮೇಲಿನ ದಾಳಿಯನ್ನು ಖಂಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್, ಕ್ರೈಸ್ತರ ಚರ್ಚುಗಳಿಗೆ ಮತ್ತು ಸಮುದಾಯದ ಜನತೆಗೆ ಸೂಕ್ತ ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ.
ಒರಿಸ್ಸಾದಲ್ಲಿನ ಧಾರ್ಮಿಕ ಸ್ವಾತಂತ್ರ್ಯತೆಯನ್ನು ರಕ್ಷಿಸಲು ತಮ್ಮ ಸರಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದವರು ಹೇಳಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ಚಿತ್ರ ಸಮೀಕ್ಷೆ - ನಾಟಕವನ್ನು ಷೂಟ್ ಮಾಡಬೇಕೆಂದರೆ ಏನು ಮಾಡಬೇಕು? ಸ್ಟೇಜ್ ಎದುರಿಗೆ ಒಂದು ಕೆಮೆರಾ ಫಿಕ್ಸ್ ಮಾಡಿ ಆನ್ ಮಾಡಿದರೆ ಆಯಿತು ಎನ್ನುವುದು ಉತ್ತರ. ಅದೇ ಟೆಕ್ನಿಕ್ ಬಳಸಿರುವುದು "ಆಪರೇಷನ್ ಅಂಕುಶ" ಚಿತ್ರದ ವಿಶೇಷ. |
| |
|
|
|
|
 | | PTI |
| | | ಅನಿಲ್ ಕುಂಬ್ಳೆ | | ಇತ್ತೀಚೆಗೆ ನಡೆದ ಕ್ರಿಕೆಟ್ ಟೆಸ್ಟ್ ಸರಣಿಯಲ್ಲಿ, ಇಪ್ಪತ್ತೇಳು ವರ್ಷಗಳ ಬಳಿಕ ಸಾಂಪ್ರದಾಯಿಕ ವೈರಿ ಪಾಕಿಸ್ತಾನದ... |
|
| |
|
|
|
|
|
| ಆತ್ಮಚರಿತ್ರೆ - ಈ ಮಣ್ಣಿನ ಸೊಗಡಿನ ಸಾಹಿತ್ಯ ರಚಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ಕು.ವೀರಭದ್ರಪ್ಪನರ 'ಅರಮನೆ' ಕಾದಂಬರಿಗೆ ಈಗ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿ. |
| |
|
|
|
|
|
|
|