|
| ಮಾವೋವಾದಿಗಳಿಗೆ ನಿಷೇಧವಿಲ್ಲ-ಬುದ್ದದೇವ್ |
| ಕೋಲ್ಕತಾ, ಗುರುವಾರ, 3 ಜುಲೈ 2008 ( 17:48 IST ) | |
ಮಾವೋವಾದಿಗಳ ಚಟುವಟಿಕೆಗಳು ಹೆಚ್ಚಾಗಿದ್ದರೂ ಸರಕಾರ ಮಾವೋವಾದಿಗಳ ಸಮಾಜಿಕ-ಆರ್ಥಿಕ ಕೊರತೆಗಳನ್ನು ನೀಗಿಸಿ ಅಡಳಿತಾತ್ಮಕವಾಗಿ, ರಾಜಕೀಯವಾಗಿ ಮಾವೋಗಳನ್ನು ನಿಯಂತ್ರಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ದದೇವ್ ತಿಳಿಸಿದ್ದಾರೆ.
ಮಾವೋವಾದಿಗಳಿಗೆ ನಿಷೇಧ ಹೇರುವುದರಿಂದ ಅವರ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಾಗುವುದು ಎಂದು ಸರಕಾರ ಭಾವಿಸಿಲ್ಲ. ನಿಷೇಧದ ಬದಲಾಗಿ ರಾಜಕೀಯವಾಗಿ , ಅಡಳಿತಾತ್ಮಕವಾಗಿ ಸಮಾಜಿಕ ಆರ್ಥಿಕ ಅಭಿವೃದ್ಧಿ ಕಾರ್ಯಗಳಿಂದ ಅವರನ್ನು ನಿಭಾಯಿಸಲಾಗುವುದು ಎಂದು ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಜಿವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ದೆಹಲಿಯ ಪ್ರಧಾನ ಮಂತ್ರಿಯವರ ಸಭೆಯಲ್ಲಿ ಅನೇಕ ರಾಜ್ಯಗಳು ಮಾವೋವಾದಿಗಳಿಗೆ ನಿಷೇಧ ಹೇರಬೇಕು ಎಂದು ಸಲಹೆ ನೀಡಿದ್ದು, ಆದರೆ ಪಶ್ಚಿಮ ಬಂಗಾಳ ಸರಕಾರ ಆ ದಿಕ್ಕಿನಲ್ಲಿ ಸಾಗುವುದಿಲ್ಲ ಎಂದು ಗೃಹ ಖಾತೆಯನ್ನು ಕೂಡಾ ಹೊಂದಿರುವುದರಿಂದ ಮುಖ್ಯಮಂತ್ರಿ ಭಟ್ಟಾಚಾರ್ಜಿ ವಿರೋಧ ಪಕ್ಷದ ನಾಯಕರಾದ ಪಾರ್ಥಾ ಚಟರ್ಜಿಯವರಿಗೆ ತಿಳಿಸಿದರು.
ಮಾವೋವಾದಿಗಳಿಂದ ಪೀಡಿತವಾದ ಪ್ರದೇಶಗಳಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬುದ್ದದೇವ್ ತಿಳಿಸಿದ್ದಾರೆ.
ಮಾವೋವಾದಿಗಳಿಂದ ಪೀಡಿತವಾದ ಪ್ರದೇಶಗಳಾದ ಪುರುಲಿಯಾ,ಬಂಕೂರಾ ಮತ್ತು ಪಶ್ಚಿಮ ಮಿಡ್ನಾಪುರ್ ಜಿಲ್ಲೆಗಳಲ್ಲಿ ಸರಕಾರ ಪೊಲೀಸ್ ಬಲವನ್ನು ಹೆಚ್ಚಿಸಲಾಗಿದ್ದು, ಮಾವೋವಾದಿಗಳ ಚಟುವಟಿಕೆಗಳ ಬಗ್ಗೆ ನಿಗಾವಹಿಸುತ್ತಿದೆ ಎಂದು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|