|
| ಆ.20ರಂದು ದೇಶವ್ಯಾಪಿ ಮುಷ್ಕರಕ್ಕೆ ಎಡಪಕ್ಷಗಳ ಕರೆ |
| ವಿಜಯವಾಡ, ಬುಧವಾರ, 9 ಜುಲೈ 2008 ( 15:50 IST ) | |
ಎಡಪಕ್ಷ ಬೆಂಬಲಿತ ಕಾರ್ಮಿಕ ಸಂಘನೆಗಳು ಆಗಸ್ಟ್ 20ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆನೀಡಿದ್ದು, ಯುಪಿಎ ಸರ್ಕಾರದ ಆರ್ಥಿಕ ಮತ್ತು ಕಾರ್ಮಿಕ ವಿರೋಧಿ ನೀತಿಗಳ ಬಗ್ಗೆ ಪ್ರತಿಭಟನೆ ನಡೆಸಲಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿಲಿದ್ದಾರೆ. ಕಾರ್ಮಿಕ ಸಂಘಟನೆಯು ಆ.4ರಂದು ಮುಷ್ಕರ ನಡೆಸುವ ಕುರಿತು ಸರ್ಕಾರಕ್ಕೆ ನೋಟಿಸ್ ನೀಡಲಿದೆ ಎಂದು ಅಖಿಲಭಾರತ ಕಾರ್ಮಿಕ ಸಂಘಟನೆ ಒಕ್ಕೂಟ(ಎಐಟಿಯುಸಿ)ದ ಆಂಧ್ರಪ್ರದೇಶ ಘಟಕದ ಪ್ರಧಾನಕಾರ್ಯದರ್ಶಿ ಪಿ.ಜೆ.ಚಂದ್ರಶೇಖರ ರಾವ್ ವರದಿಗಾರರಿಗೆ ತಿಳಿಸಿದರು.
ಇದಕ್ಕೆ ಮುಂಚಿತವಾಗಿ ಸಂಘಟನೆಯ ಪ್ರತಿನಿಧಿಗಳು ಜು.21ರಂದು ಭೇಟಿ ಮಾಡಿ ಮುಷ್ಕರದ ಕಾರ್ಯತಂತ್ರವನ್ನು ಅಂತಿಮಗೊಳಿಸಲಿದ್ದಾರೆ. ಮುಷ್ಕರದ ಕರೆಯನ್ನು 56 ಸಂಘಟನೆಗಳು ಮತ್ತು ಅದರ ಸಹಾಯಕ ಘಟಕಗಳು ನೀಡಿದ್ದು, ಅವು ಏಳು ಬೇಡಿಕೆಗಳ ಪಟ್ಟಿಯನ್ನು ಸಿದ್ಧಪಡಿಸಿವೆ ಎಂದು ರಾವ್ ಹೇಳಿದರು.
ಅಗತ್ಯವಸ್ತುಗಳ ಬೆಲೆ ನಿಯಂತ್ರಣಕ್ಕೆ ತಕ್ಷಣದ ಕ್ರಮಗಳು, ಅಸಂಘಟಿತ ಕ್ಷೇತ್ರದ ಕಲ್ಯಾಣ ಕಾರ್ಯಕ್ರಮ ಜಾರಿ, ಪಡಿತರ ವಿತರಣೆ ವ್ಯವಸ್ಥೆ ಬಲಪಡಿಸುವುದು ಮತ್ತು ಉದ್ಯೋಗದ ಗುತ್ತಿಗೆ ವ್ಯವಸ್ಥೆ ರದ್ದು ಮಾಡುವುದು ಬೇಡಿಕೆಗಳಲ್ಲಿ ಸೇರಿವೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು. |
| |
|
|
|
|
|
|
|