ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ವಿಶ್ವಾಸಮತದಲ್ಲಿ ಪಪ್ಪುಯಾದವ್
ನವದೆಹಲಿ, ಶುಕ್ರವಾರ, 18 ಜುಲೈ 2008   ( 13:36 IST )
ವಿವಾದಾತ್ಮಕ ಲೋಕಸಭಾ ಸದಸ್ಯನಾಗಿರುವ ಆರ್‌ಜೆಡಿ ಪಕ್ಷದ ಪಪ್ಪು ಯಾದವ್‌ಗೆ ವಿಶ್ವಾಸ ಮತದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಈತನಿಗೆ ದೆಹಲಿ ನ್ಯಾಯಾಲಯ ಈ ಅನುಮತಿಯನ್ನು ನೀಡಿದೆ.

ಯಾದವ್, 1998ರ ಜೂನ್‌ 14 ರಂದು ನಡೆದ ಸಿಪಿಐ(ಎಂ), ಎಂಎಲ್‌ಎ ಅಜಿತ್ ಸರ್ಕಾರ್ ಅವರ ಕೊಲೆ ಪ್ರಕರಣದಲ್ಲಿ ದೋಷಿಯನ್ನಾಗಿಸಿ ಶಿಕ್ಷೆಯನ್ನು ವಿಧಿಸಲಾಗಿತ್ತು.

ವಿಶ್ವಾಸಮತದಲ್ಲಿ ಪಾಲ್ಗೊಳ್ಳುವ ಕುರಿತಾದ ಮನವಿಯನ್ನು ಯಾದವ್ ಅವರ ವಕೀಲರು ಕೋರ್ಟ್‌ಗೆ ಸಲ್ಲಿಸಿದ್ದರು. ಅವರು ಇದರಲ್ಲಿ, ಯಾದವ್ ಈ ಮುನ್ನ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಭಾಗವಹಿಸಿದ್ದುದ್ದನ್ನು ಉಲ್ಲೇಖಿಸಿದ್ದರು.

ಎಲ್ಲಾ ವಿವರಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಜಿ.ಎಸ್.ಗಿಸ್ತಾನಿ ಅವರು ಜುಲೈ 22ರಂದು ನಡೆಯುವ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಭಾಗವಹಿಸಲು ಅನುಮತಿ ನೀಡಿದರು.

ಕೋರ್ಟು ಬಿಹಾರದ ಮೇಧಾಪುರದ ಈ ಸಂಸತ್ ಸದಸ್ಯನಿಗೆ ಸೂಕ್ತವಾದ ಭದ್ರತಾ ವ್ಯವಸ್ಥೆ ಏರ್ಪಡಿಸುವಂತೆ ಜೈಲಿನ ಸಿಬ್ಬಂದಿಗೆ ನಿರ್ದೇಶನವನ್ನು ನೀಡಿದೆ.

ರಾಜೇಶ್ ರಂಜನ್ ಅಲಿಯಾಸ್ ಪಪ್ಪುಯಾದವ್ 2005 ಫೆಬ್ರವರಿವರೆಗೆ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಈ ವರ್ಷ ಫೆಬ್ರವರಿ 14ರಂದು ಆತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಮೇಧಾಪುರಕ್ಕೆ ವರ್ಗಾಯಿಸಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಯುಪಿಎ ಬೆಂಬಲಕ್ಕೆ ಲಾಭದ ಲೆಕ್ಕ ಹಾಕಿರುವ ಸಣ್ಣಪಕ್ಷಗಳು
ಯುಪಿಎ ವಿಶ್ವಾಸಮತ ಗೆಲ್ಲಲಿದೆ-ಡಿಎಂಕೆ
ವಿದರ್ಭದಲ್ಲಿ ರಾಹುಲ್ ಸಂಚಾರ
ಕಾಂಗ್ರೆಸ್ ನಂಬುವುದು ತಪ್ಪು: ಕಾರಟ್
ಓಲೈಕಾ ತಂತ್ರದಲ್ಲಿ ತೊಡಗಿಲ್ಲ: ಕಾಂಗ್ರೆಸ್
ಯುಪಿಎ ವಿರುದ್ಧ ಪಕ್ಷೇತರ ನಾಗಪಾಲ್ ಮತ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...