|
| ವೈಥಿಲಿಂಗಂ ಪುದುಚೇರಿ ಮುಖ್ಯಮಂತ್ರಿಯಾಗಿ ಪ್ರಮಾಣ |
| ಪುದುಚೇರಿ, ಗುರುವಾರ, 4 ಸೆಪ್ಟೆಂಬರ್ 2008 ( 20:04 IST ) | |
ವಿ.ವೈಥಿಲಿಂಗಂ ಗುರುವಾರ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್‌ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಇನ್ನೂ ಐವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಲೆಫ್ಟಿನೆಂಟ್ ಗವರ್ನರ್ ಗೋವಿಂದ್ ಸಿಂಗ್ ಗುರ್ಜಾರ್ ವೈಥಿಲಿಂಗಮ್ ಮತ್ತಿತರರಿಗೆ ಅಧಿಕಾರ, ಗೌಪ್ಯತೆಯ ವಿಧಿಯನ್ನು ಬೋಧಿಸಿದರು. ವೈಥಿಲಿಂಗಮ್ ಇದು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುತ್ತಿರುವುದು. ಇದಕ್ಕೆ ಮುಂಚೆ 1991 ಮತ್ತು 1996ರ ನಡುವೆ ಕಾಂಗ್ರೆಸ್ ಸರ್ಕಾರದ ನೇತೃತ್ವವನ್ನು ಅವರು ವಹಿಸಿದ್ದರು.
ಕ್ಯಾಬಿನೆಟ್ ಐವರು ಸಚಿವರು ಸೇರಿದಂತೆ 10 ಕಾಂಗ್ರೆಸ್ ಶಾಸಕರಲ್ಲಿ ಬಹುತೇಕ ಮಂದಿ ಬಂಡಾಯವೆದ್ದ ಬಳಿಕ ಮುಖ್ಯಮಂತ್ರಿ ಎನ್.ರಂಗಸ್ವಾಮಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಸಚಿವಸಂಪುಟದ ರಚನೆ ಅಗತ್ಯವಾಗಿತ್ತು. ವೈಥಿಲಿಂಗಮ್ ರಂಗಸ್ವಾಮಿ ಸಂಪುಟದಲ್ಲಿ ಕೈಗಾರಿಕೆ ಮತ್ತು ವಿದ್ಯುತ್ ಸಚಿವರಾಗಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|