|
| 'ಬಿಗ್ ಬಿ' ಆಸ್ಪತ್ರೆಗೆ ದಾಖಲು |
| ಮುಂಬೈ, ಶನಿವಾರ, 11 ಅಕ್ಟೋಬರ್ 2008 ( 16:48 IST ) | |
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಶನಿವಾರ 67ರ ಹುಟ್ಟುಹಬ್ಬದ ಸಂಭ್ರಮದ ಮಧ್ಯೆಯೇ ಕಳೆದ ರಾತ್ರಿ ಕಾಣಿಸಿಕೊಂಡ ಹೊಟ್ಟೆನೋವಿನಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.
ಶುಕ್ರವಾರ ರಾತ್ರಿಯಿಂದಲೇ ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅಮಿತಾಬ್ ಬಚ್ಚನ್ ಅವರನ್ನು ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಲ್ಲದೇ ಇಂದು ಬಿಗ್ ಬಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳ ದಂಡು ಮುಂಬೈನ ಜುಹುವಿನಲ್ಲಿರುವ ಮನೆಯ ಮುಂದೆ ಜಮಾಯಿಸಿದ್ದು, ಮನೆಯ ಸುತ್ತ-ಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬಿಗ್ ಬಿ ಆರೋಗ್ಯದ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಕುಟುಂಬದ ಸದಸ್ಯರು ಅಭಿಮಾನಿಗಳಿಗೆ ಸಮಾಧಾನ ಹೇಳಿದ್ದಾರೆ.
ಅಲ್ಲದೇ ಈಗಾಗಲೇ ಆಸ್ಪತ್ರೆಯ ಮುಂಭಾಗದಲ್ಲಿಯೂ ಅಭಿಮಾನಿಗಳು ಜಮಾಯಿಸಿದ್ದು, ಅವರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಹರಸಾಹಸಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|