|
| ಅದಿಲಾಬಾದ್ ದೊಂಬಿ: ಸಿಬಿಐ ತನಿಖೆಗೆ ಆದೇಶ |
| ಹೈದರಾಬಾದ್, ಸೋಮವಾರ, 13 ಅಕ್ಟೋಬರ್ 2008 ( 09:22 IST ) | |
ಅದಿಲಾಬಾದ್ ಜಿಲ್ಲೆಯಲ್ಲಿನ ಕುಟುಂಬದ ಆರು ಜನರನ್ನು ಜೀವಂತವಾಗಿ ಸುಟ್ಟು ಹಾಕಿದ ಘಟನೆಯನ್ನು ಸಿಬಿಐ ತನಿಖೆ ಹಾಗೂ ಕೋಮು ಹಿಂಸಾಚಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಆಂಧ್ರಪ್ರದೇಶ ಸರಕಾರ ಆದೇಶ ನೀಡಿದೆ.
ವಟೊಲಿ ಹಳ್ಳಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪರಿಣಾಮವಾಗಿ ಮೂವರು ಮಕ್ಕಳು ಸೇರಿದಂತೆ ಕುಟುಂಬದ ಆರು ವ್ಯಕ್ತಿಗಳು ಹತರಾಗಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವುದರ ಜತೆಗೆ, ಕಳೆದ ಶುಕ್ರವಾರ ದುರ್ಗಾ ಮೂರ್ತಿಯ ವಿಸರ್ಜನೆಯ ಮೆರವಣಿಗೆ ವೇಳೆ ಭೈನ್ಸಾದಲ್ಲಿ ಉದ್ಭವಿಸಿದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಲೂ ಆದೇಶಿಸಲಾಗಿದೆ.
ಗೃಹ ಸಚಿವ ಕೆ ಜಾನ ರೆಡ್ಡಿ ಮತ್ತು ಡಿಜಿಪಿ ಎಸ್ ಎಸ್ ಪಿ ಯಾದವ್ ಮತ್ತು ಇತರ ಹಿರಿಯ ಅಧಿಕಾರಿಗಳ ಜತೆ ಭೈನ್ಸಾ ಮತ್ತು ಅದಿಲಾಬಾದ್ ಜಿಲ್ಲೆಯ ಸುತ್ತಮುತ್ತ ಸಂಭವಿಸಿದ ಹಿಂಸಾತ್ಮಕ ಘಟನೆಗಳ ಪರಾಮರ್ಶೆ ನಡೆಸಿದ ಮುಖ್ಯಮಂತ್ರಿ ವಟೊಲಿ ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಲು ನಿರ್ಧರಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮುಂಚೆ ರೆಡ್ಡಿ ವರದಿಗಾರರಲ್ಲಿ ಮಾತನಾಡುತ್ತಾ, ಅದಿಲಾಬಾದ್ ಜಿಲ್ಲೆಯಲ್ಲಿನ ಕೋಮು ಹಿಂಸಾಚಾರವನ್ನೂ ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ಹೇಳಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|