|
| ಮಮತಾ ಮುಂದಿನ ಮುಖ್ಯಮಂತ್ರಿ: ಪ್ರಣವ್ ಭರವಸೆ |
| ನವದೆಹಲಿ, ಬುಧವಾರ, 20 ಮೇ 2009 ( 11:30 IST ) | |
ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್-ತೃಣಮೂಲ ಮೈತ್ರಿ ಕೂಟವು ಎಡಪಕ್ಷಗಳನ್ನು ಬಗ್ಗುಬಡಿದಿರುವ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂಬುದಾಗಿ ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೂರು ದಶಕಗಳ ಬಳಿಕ ರಾಜ್ಯದಲ್ಲಿ ಮತದಾರರು ಎಡಪಕ್ಷಗಳಿಂದ ವಿಮುಕ್ತರಾಗುತ್ತಿರುವ ಕಾರಣ ಮಮತಾ ರಾಜ್ಯದ ಪ್ರಮುಖ ಸ್ಥಾನವನ್ನು ಆಕ್ರಮಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಮಮತಾ ಅವರು ಮುಖ್ಯಮಂತ್ರಿ ಯಾಗುವ ಕುರಿತು ನೀವೇನು ಹೇಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಣಬ್, ಮಮತಾ ಅವರು ಮುಖ್ಯಮಂತ್ರಿಯಾಗುವುದರಲ್ಲಿ ನಮಗೇನು ಸಮಸ್ಯೆ ಇಲ್ಲ ಎಂದು ನುಡಿದರು.
ಕಠಿಣ ನಿಲವಿನ ಮಮತಾ ಅವರೊಬ್ಬ ಉತ್ತಮ ಮುಖ್ಯಮಂತ್ರಿಯಾಗಬಹುದೇ ಎಂಬ ಪ್ರಶ್ನೆಗೆ ತಾನು ಯಾವುದೇ ತೀರ್ಪುಗಳನ್ನು ನೀಡಲು ಇಚ್ಚಿಸುವುದಿಲ್ಲ, ಆದರೆ ಸ್ಥಾನಮಾನವು ಜವಬ್ದಾರಿಯನ್ನು ತರುತ್ತದೆ ಎಂದು ಉತ್ತರಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|