|
| 5 ಗಂಟೆಗೆ ಸಿಂಗ್, ಸೋನಿಯಾ ರಾಷ್ಟ್ರಪತಿ ಭೇಟಿ |
| ನವದೆಹಲಿ, ಬುಧವಾರ, 20 ಮೇ 2009 ( 16:14 IST ) | |
ಮಿತ್ರಪಕ್ಷಗಳ ಬೆಂಬಲ ಪತ್ರದೊಂದಿಗೆ ಸಜ್ಜಿತವಾಗಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮನಮೋಹನ್ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರುಗಳು ಬುಧವಾರ ಸಂಜೆ ಐದು ಗಂಟೆಗೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಸಾಂಯಕಾಲ ಈ ಇಬ್ಬರು ನಾಯಕರು ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದು, ತಮ್ಮ ಮಿತ್ರಪಕ್ಷಗಳು ನೀಡಿರುವ ಬೆಂಬಲ ಪತ್ರವನ್ನು ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ನಿವಾಸದಲ್ಲಿ ಬುಧವಾರ ಮುಂಜಾನೆ ನಡೆದ ಯುಪಿಎ ಮಿತ್ರಪಕ್ಷಗಳ ಸಭೆಯಲ್ಲಿ ಸರ್ಕಾರ ರಚಿಸುವ ಹಕ್ಕು ಮಂಡಿಸುವ ಕುರಿತು ನಿರ್ಧರಿಸಲಾಗಿದೆ. ಸಭೆಯಲ್ಲಿ ಸೋನಿಯಾ ಅವರನ್ನು ಯುಪಿಎ ಅಧ್ಯಕ್ಷೆಯಾಗಿ ಮರು ಆಯ್ಕೆ ಮಾಡಲಾಗಿದೆ. ಹಾಗೂ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಅಯ್ಕೆ ಮಾಡಲಾಯಿತು.
ಸಭೆಯಲ್ಲಿ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರು ಯುಪಿಎ ಅಧ್ಯಕ್ಷೆ ಸ್ಥಾನಕ್ಕೆ ಸೋನಿಯಾ ಗಾಂಧಿ ಹೆಸರನ್ನು ಪ್ರಸ್ತಾಪಿಸಿದ್ದು, ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಮಮತಾ ಬ್ಯಾನರ್ಜಿ ಅನುಮೋದಿಸಿದರು.
ಕೇಂದ್ರದಲ್ಲಿ ಮುಂದಿನ ಸರ್ಕಾರ ರೂಪಿಸುವ ವಸ್ತುಸ್ಥಿತಿಯ ಕುರಿತು ಚರ್ಚಿಸಲು ಮಿತ್ರ ಪಕ್ಷಗಳ ಮುಖಂಡರು ಸಭೆ ಸೇರಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದು ಯುಪಿಎ ಅತಿದೊಡ್ಡ ಮೈತ್ರಿಕೂಟವಾಗಿ ಮೂಡಿ ಬಂದಬಳಿಕ ಯುಪಿಎ ಸಭೆ ಸೇರಿರುವುದು ಇದೇಮೊದಲಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು |
| |
|
|
|
|
|
|