ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ದೇಶ
ರಾಜೀವ್ ಪುಣ್ಯತಿಥಿ: ಸಮಾಧಿಗೆ ಗೌರವ ಸಲ್ಲಿಕೆ
ನವದೆಹಲಿ, ಗುರುವಾರ, 21 ಮೇ 2009   ( 10:33 IST )
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಕಾಲವಾಗಿ ಇಂದಿಗೆ 18 ವರ್ಷಗಳು ಸಲ್ಲುತ್ತಿದ್ದು, ರಾಷ್ಟ್ರಾದ್ಯಂತ ಅವರ ಪುಣ್ಯತಿಥಿ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಪತ್ನಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರುಗಳು ಮುಂಜಾನೆ ವೀರ ಭೂಮಿಗೆ ತೆರಳಿ ಪುಷ್ಪಾಂಜಲಿ ಸಲ್ಲಿಸಿದರು.

ರಾಜೀವ್ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ರಾಜೀವ್ ಮಕ್ಕಳಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ಆಕೆಯ ಪತಿ ರಾಬರ್ಟ್ ವಾದ್ರ ಮತ್ತು ಮಕ್ಕಳು ಹಾಜರಿದ್ದರು. ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳವನ್ನು ನೂರಾರು ಶ್ವೇತಬಣ್ಣದ ತಾವರೆಗಳಿಂದ ಅಲಂಕರಿಸಲಾಗಿದೆ.

ಇವರಲ್ಲದೆ, ರಕ್ಷಣಾ ಸಚಿವ ಎ.ಕೆ. ಆಂಟನಿ, ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ನ್ಯಾಶನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ಕೇರಳ ಕಾಂಗ್ರೆಸ್ ಮುಖ್ಯಸ್ಥ ಕೆ.ಎಂ. ಮಣಿ ಹಾಗೂ ಹಲವಾರು ಹೊಸದಾಗಿ ಆಯ್ಕೆಯಾಗಿರುವ ಸಂಸದರು ಪುಷ್ಪಾಂಜಲಿ ಸಲ್ಲಿಸಿದರು.

ರಾಜೀವ್ ಅವರು ಎಲ್‌ಟಿಟಿಇ ಆತ್ಮಾಹುತಿ ದಾಳಿಗೆ ಬಲಿಯಾಗಿ 18 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವು 18 ಮಕ್ಕಳ ಪ್ರವೇಶದ ಮೂಲಕ ಆರಂಭಗೊಂಡಿತು.

ರಾಜೀವ್ ಗಾಂಧಿ ಅವರು 1991ರ ಮೇ 21ರಂದು ರಾತ್ರಿ ತಮಿಳ್ನಾಡಿನ ಚೆನ್ನೈನ ಶ್ರೀಪೆರಂಬದೂರು ಎಂಬಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದಾಗ ಅವರನ್ನು ಹತ್ಯೆ ಮಾಡಲಾಗಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಯುಪಿಎಗೆ ರಾಜ್ಯಸಭೆಯಲ್ಲಿ ಸಮಸ್ಯೆಯೇನೂ ಇಲ್ಲ
ಸಿಂಗ್‌ರಿಗೆ ಸರ್ಕಾರ ರಚನೆಗೆ ಆಹ್ವಾನ, 22ರಂದು ಅಸ್ತಿತ್ವಕ್ಕೆ
ತೃತೀಯರಂಗ ಸ್ಥಾಪನೆಯೊಂದು ದೊಡ್ಡ ತಪ್ಪು: ಸಿಪಿಎಂ
ಲಂಕಾಗೆ ತೆರಳಿದ ಎನ್ಎಸ್ಎ, ವಿದೇಶಾಂಗ ಕಾರ್ಯದರ್ಶಿ
5 ಗಂಟೆಗೆ ಸಿಂಗ್, ಸೋನಿಯಾ ರಾಷ್ಟ್ರಪತಿ ಭೇಟಿ
ಸುಖೀದಾಂಪತ್ಯ ನಿಮ್ಮದಾಗಬೇಕೇ?: ಹೆಂಡ್ತಿ ಮಾತು ಕೇಳಿ!
ಗ್ರಹ ಗತಿ
ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಈ ವಾರ ಸ್ಟಾರ್ ವಾರ್. ದೊಡ್ಡ ನಟರ ಎರಡು ಚಿತ್ರಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿದೆ. ಇದರಿಂದ ಸಹಜವಾಗಿಯೇ ಪ್ರೇಕ್ಷಕರ ಪ್ರತಿಕ್ರಿಯೆ ಯಾವ ಚಿತ್ರಕ್ಕೆ ಹೇಗಿರುತ್ತದೆ ಎಂಬುದು
ಮುಂದೆ ಓದಿ|ಮತ್ತಷ್ಟು...