|
| ದಕ್ಷಿಣ ಭೂಪಟದಲ್ಲಿ ಬಿಜೆಪಿ ಅಧಿಕಾರ: ಸುಷ್ಮಾ ಸ್ವರಾಜ್ |
| ಬಳ್ಳಾರಿ, ಶುಕ್ರವಾರ, 9 ಮೇ 2008 ( 19:09 IST ) | |
ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಿಶ್ಚಲ ಬಹುಮತ ಪಡೆಯುವ ಮೂಲಕ ಬಿಜೆಪಿ ದಕ್ಷಿಣ ಭೂಪಟದಲ್ಲಿ ತನ್ನ ಅಧಿಕಾರಯುತ ಎಂಟ್ರಿ ಪಡೆದುಕೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಧುರೀಣೆ ಸುಷ್ಮಸ್ವರಾಜ್ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಕುರಿತು ರೋಸಿ ಹೋಗಿದ್ದಾರೆ. ಅಲ್ಲದೆ, ಕಳೆದ ಇಪ್ಪತ್ತು ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಬಿಜೆಪಿ ನೀಡಿರುವ ಅಭಿವೃದ್ಧಿ ಬಜೆಟ್ಟನ್ನು ಜನತೆ ಇನ್ನು ಮರೆತಿಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನಾಳೆ ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ಎರಡನೆ ಹಂತದ ಚುನಾವಣೆಯಲ್ಲಿನ ಎಲ್ಲಾ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಯಾಗಿದ್ದು, ಅಲ್ಲಿ ಕೂಡ ನಿರೀಕ್ಷೆಯಂತೆ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆರಿಸಿ ಬರಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಬಳ್ಳಾರಿಯ ಪ್ರಮುಖ ಅಬ್ಕಾರಿ ಗುತ್ತಿಗೆದಾರ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ಎಸ್. ಲಿಂಗಣ್ಣನವರು ಬಿಜೆಪಿಗೆ ಸೇರ್ಪಡೆಗೊಂಡರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಆಶಾವಾದ ಮತ್ತು ಧನಾತ್ಮಕ ವರ್ತನೆ ಮತ್ತು ಹೆಜ್ಜೆಗಳ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿತರನ್ನಾಗಿಸುತ್ತವೆ. ಮಿತ್ರರು ನಿಮ್ಮ ಬೆಂಬಲಕ್ಕೆ ಬರಲಿದ್ದಾರೆ ಮತ್ತು ಮಹತ್ವದ ಕೆಲಸವೊಂದು ಪೂರ್ಣಗೊಳ್ಳಲಿದೆ. ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಗಳಿಸುತ್ತೀರಿ. ನೀವೀಗ ಮನಸ್ಸಿನ ಆಶಾವಾದಿ ಚೌಕಟ್ಟಿನಲ್ಲಿದ್ದೀರಿ, ಆದರೆ ಸುವಸ್ತುಗಳಿಗಾಗಿ ನೀವು ದುಂದುವೆಚ್ಚಕ್ಕೆ ಮುಂದಾಗುವ ಸಾಧ್ಯತೆಗಳಿವೆ. |
| |
|
|
|
|
 | | pti |
| | |
| |
|
|
|
|
|
| ಚಿತ್ರ ಸುದ್ದಿ - ಕೆಲವು ನಟರು ಕನ್ನಡದಿಂದ ಪರಭಾಷಾ ಚಿತ್ರಕ್ಕೆ ನಟಿಸಲು ಹೋದರೆ ಮತ್ತೆ ಕನ್ನಡಕ್ಕೆ ಬರುವುದಿಲ್ಲ. ಉತ್ತಮ ಅವಕಾಶಗಳು ಅಲ್ಲಿ ಸಿಕ್ಕರೆ ಮತ್ತೆ ಅವರು ಕನ್ನಡಕ್ಕೆ ಬರುವುದಿಲ್ಲ. ಉದಾಹರಣೆಗೆ ನಮ್ಮ ಪ್ರಕಾಶ್ ರೈ. ಈಗ ಈ ಸಾಲಿಗೆ ನಮ್ಮ ಸುದೀಪ್ ಸೇರುತ್ತಾರೋ ಎಂಬ ಭಯ ಕನ್ನಡಿಗರನ್ನು ಕಾಡುತ್ತಿದೆ. |
| |
|
|
|
|
|
|
|