|
| ಮೊದಲ ಹಂತದ ಚುನಾವಣೆ: ಶೇ.59.5ರಷ್ಟು ಮತದಾನ |
| ಬೆಂಗಳೂರು, 10 ಮೇ 2008 ( 18:32 IST ) | |
ಕರ್ನಾಟಕದ 11 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ ನಡೆದ ಪ್ರಥಮ ಹಂತದ ವಿಧಾನಸಭೆ ಚುನಾವಣೆಯ ಮುಕ್ತಾಯದ ವೇಳೆಯಲ್ಲಿ ಅಂದಾಜು ಶೇ.59.5ರಷ್ಟು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆಂದು ಚುನಾವಣೆ ಆಯೋಗದ ಮೂಲಗಳು ಹೇಳಿವೆ.
ಮಾಜಿ ಪ್ರಧಾನಮಂತ್ರಿ ದೇವೇಗೌಡ, ಅವರ ಇಬ್ಬರು ಪುತ್ರರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ, ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹಕ್ಕನ್ನು ಚಲಾಯಿಸಿದರೆಂದು ವರದಿಗಳು ತಿಳಿಸಿವೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ 11 ಜಿಲ್ಲೆಗಳಲ್ಲಿ ಪ್ರಥಮ ಹಂತದ ಚುನಾವಣೆ ನಡೆಯುತ್ತಿದ್ದು, ಒಟ್ಟು 89 ಕ್ಷೇತ್ರಗಳ ಪೈಕಿ ಬೆಂಗಳೂರಿನಲ್ಲಿ 28 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಬೆಂಗಳೂರು ಮತ್ತು ಹಳೆಮೈಸೂರು ಪ್ರದೇಶದ 17 ಮಹಿಳೆಯರು ಸೇರಿದಂತೆ ಸುಮಾರು 953 ಅಭ್ಯರ್ಥಿಗಳು ತಮ್ಮ ಭವಿಷ್ಯವನ್ನು ಪ್ರಥಮ ಹಂತದ ಚುನಾವಣೆಯಲ್ಲಿ ಪಣಕ್ಕೊಡ್ಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|