|
| ಪೋಖ್ರಾನ್ ಆಚರಣೆ ಕೈಬಿಟ್ಟಿದ್ದು ದುರದೃಷ್ಟಕರ:ಅಡ್ವಾಣಿ |
| ಹುಬ್ಬಳ್ಳಿ, 12 ಮೇ 2008 ( 12:02 IST ) | |
ಪೋಖ್ರಾನ್ ಅಣುಸ್ಫೋಟ ದಿನಾಚರಣೆಯನ್ನು ಅಮೇರಿಕಾದ ಒತ್ತಡದಿಂದ ಕಾಂಗ್ರೆಸ್ ಕೈಬಿಟ್ಟಿರುವುದು ದುರದೃಷ್ಟಕರ ಎಂದು ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ವಿಷಾದಿಸಿದ್ದಾರೆ.
ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು, ವಿಶ್ವದಲ್ಲಿ ಭಾರತಕ್ಕೆ ಗೌರವ ತಂದುಕೊಟ್ಟ ಪೋಖ್ರಾನ್ ಅಣುಸ್ಪೋಟದ ದಶಮಾನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕಿತ್ತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಡ್ವಾಣಿ, 2004ರಿಂದ ದೇಶದಲ್ಲಿ ಕಾಂಗ್ರೆಸ್ ಪ್ರಭಾವ ಕುಂಠಿತವಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅದು ಸ್ಪಷ್ಟವಾಗಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನದ ಸಮೀಕ್ಷೆ ಹಾಗೂ ಮತದಾರರ ಒಲವು ಗಮನಿಸಿದರೆ ಬಿಜೆಪಿಗೆ ಬಹುಮತ ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಅತಿಯಾದ ಆತ್ಮವಿಶ್ವಾಸದಿಂದಾಗಿ ನಾವು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದು ಅವರು ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|