|
| ಕಡಿಮೆ ಮತದಾನಕ್ಕೆ ಆಯೋಗ ಕಾರಣ:ಕೃಷ್ಣ ಆರೋಪ |
| ಉಡುಪಿ, ಸೋಮವಾರ, 12 ಮೇ 2008 ( 12:23 IST ) | |
ಮೊದಲ ಹಂತದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಲು ಆಯೋಗದ ಕ್ರಮವೇ ಕಾರಣ ಎಂದು ಕಾಂಗ್ರೆಸ್ ಧುರೀಣ ಎಸ್.ಎಂ. ಕೃಷ್ಣ ಆರೋಪಿಸಿದ್ದಾರೆ.
ಭಾನುವಾರ ಚುನಾವಣಾ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾಗಲು ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮವೇ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಸಚಿವರ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಕಾದುನೋಡುವ ತಂತ್ರಕ್ಕೆ ಮೊರೆ ಹೋಗುವುದಾಗಿ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಸಮಾಜವಾದಿ ಪಕ್ಷಕ್ಕೆ ನೀಡಿರುವ ಬೆಂಬಲದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪರ ತಾವು ಪ್ರಚಾರ ಮಾಡುವುದಿಲ್ಲವೆಂದು ಸ್ಪಷ್ಟಪಡಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|