|
| ದಿವಾಕರ್ ಬಾಬು ಕಾಂಗ್ರೆಸ್ ಸೇರ್ಪಡೆ |
| ಬಳ್ಳಾರಿ, ಸೋಮವಾರ, 12 ಮೇ 2008 ( 12:57 IST ) | |
ಎರಡನೆ ಹಂತದ ಚುನಾವಣೆಗೆ ನಾಲ್ಕು ದಿನ ಬಾಕಿ ಇರುವಂತೆಯೇ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ತಿರುವು ಕಂಡು ಬಂದಿದೆ.ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದ ಮಾಜಿ ಸಚಿವ ದಿವಾಕರ್ ಬಾಬು ಮರಳಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಸೋಮವಾರದಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ದಿವಾಕರ್ ಬಾಬು ಕಾಂಗ್ರೆಸ್ ಸೇರ್ಪಡೆಗೊಂಡರು.
ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿ ಬಾಬು, ಕೋಮುವಾದಿ ಶಕ್ತಿಗಳನ್ನು ಸೋಲಿಸುವುದಕ್ಕಾಗಿ ತಾವು ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕಣದಿಂದ ಹಿಂದಕ್ಕೆ ಸರಿದಿರುವ ಇವರು, ಅನಿಲ್ ಲಾಡ್ಗೆ ಬೆಂಬಲ ಸೂಚಿಸಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ಹಾಗೂ ಕಾಂಗ್ರೆಸ್ ನಾಯಕ ಅಂಬರೀಷ್ ಬಳ್ಳಾರಿಯಲ್ಲಿನ ದಿವಾಕರ್ ಬಾಬು ಅವರ ಮನೆಗೆ ತೆರಳಿ ನಡೆಸಿರುವ ಮಾತುಕತೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಈ ಮೂಲಕ ಬಳ್ಳಾರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಲಾಡ್ಗೆ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|