|
| ರಾಜ್ ಪುತ್ಥಳಿ ವಿರೂಪ: ಕನ್ನಡ ಸಂಘಟನೆಗಳ ರಸ್ತೆ ತಡೆ |
| ಬೆಂಗಳೂರು, ಸೋಮವಾರ, 12 ಮೇ 2008 ( 18:06 IST ) | |
ಮೇರುನಟ ಡಾ. ರಾಜ್ ಕುಮಾರ್ ಪುತ್ಥಳಿ ವಿರೂಪಗೊಳಿಸಿದ ಘಟನೆಯನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು (ಸೋಮವಾರ) ನಾಯಂಡನಹಳ್ಳಿ ಹಾಗೂ ಪಂತರಪಾಳ್ಯದಲ್ಲಿ ರಸ್ತೆ ತಡೆ ನಡೆಸಿದರು.
ಇಂದು ಬೆಳಿಗ್ಗೆಯಿಂದಲೇ ಈ ಪ್ರದೇಶದ ಕೆಲವು ಕಡೆ ಅಂಗಡಿಗಳನ್ನು ಮುಚ್ಚಲಾಗಿತ್ತು. ಸ್ಥಳೀಯ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಘಟನೆಯನ್ನು ಕಟುವಾಗಿ ಖಂಡಿಸಿದ್ದು, ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಯಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಕೂಡ ಧರಣಿ ನಿರತರೊಂದಿಗೆ ಸೇರಿ ಈ ಘಟನೆಯನ್ನು ಖಂಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಂತಿ ಕಾಪಾಡಿ ಎಂಬ ರಾಜ್ಕುಮಾರ್ ಅವರ ಆದರ್ಶ ಪಾಲಿಸಬೇಕು. ಹೋರಾಟ, ಹಿಂಸಾರೂಪ ಬೇಡ ಎಂದು ರಾಜ್ ಅಭಿಮಾನಿಗಳಿಗೆ ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ ನಾಯಂಡನಹಳ್ಳಿ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ ವರ್ತಕರೂ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಇದರಿಂದ ಸಂಚಾರಕ್ಕೆ ಕೆಲಹೊತ್ತು ಅಡಚಣೆಯುಂಟಾಯಿತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|