ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಬೆಂಗಳೂರು, 1 ಜುಲೈ 2008   ( 12:50 IST )
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುಷ್ಕರ ನಡೆಯಲಿದೆ. ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಈ ಮುಷ್ಕರಕ್ಕೆ ಕರೆ ನೀಡಿದೆ.

ಕೇಂದ್ರ ಸಮಿತಿಯ ಕರೆಗೆ ಬೆಂಬಲ ನೀಡಲು ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಲು ರಾಜ್ಯದಲ್ಲೂ ಮುಷ್ಕರ ತೀವ್ರಗೊಳಿಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಮತ್ತು ಏಜೆಂಟ್ಸ್ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಹಳೆಯ ಹಾಗೂ ಹೊಸ ಲಾರಿಗಳಿಗೆ ಸ್ಪೀಡ್ ಗವರ್ನರ್ ಅಳವಡಿಸಬೇಕೆಂಬುದನ್ನು ಲಾರಿ ಮಾಲೀಕರು ಬಲವಾಗಿ ವಿರೋಧಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ 2 ಲಕ್ಷ 75 ಸಾವಿರ ಲಾರಿಗಳಿದ್ದು, ಮುಷ್ಕರದಿಂದ ದಿನಕ್ಕೆ 500 ಕೋಟಿ ರೂ ನಷ್ಟವಾಗುತ್ತದೆ ಎಂದು ಕಾರ್ಯದರ್ಶಿ ಬಿ.ವಿ. ನಾರಾಯಣಪ್ಪ ತಿಳಿಸಿದ್ದಾರೆ.

ಬೆಂಬಲ ಇಲ್ಲ

ಈ ನಡುವೆ ಮುಷ್ಕರಕ್ಕೆ ರಾಜ್ಯ ಸಂಘಗಳ ಒಕ್ಕೂಟ ಬೆಂಬಲ ನೀಡುವುದಿಲ್ಲ ಎಂದು ಒಕ್ಕೂಟದ ಅಧ್ಯಕ್ಷ ಚನ್ನಾರೆಡ್ಡಿ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಸೇವೆ
ಅಮ‌್ಯೂಸ್‌ಮೆಂಟ್ ರೈಡ್‌ನಲ್ಲಿ ಮಹಿಳೆ ಬಲಿ
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಮಹಿಳಾ ಆಯೋಗಕ್ಕೆ ಮತ್ತೆ ನೇಸರ್ಗಿ
ಅತಿಕ್ರಮಣಕಾರರ ವಿರುದ್ಧ ಶಿಸ್ತುಕ್ರಮ
ನಗರದಲ್ಲಿ ಹೆಚ್ಚುತ್ತಿರುವ ಚಿಕೂನ್ ಗುನ್ಯಾ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರೈತರಿಗೆ ಉಚಿತ ವಿದ್ಯುತ್ ಅಸಾಧ್ಯ: ಮುಖ್ಯಮಂತ್ರಿ
ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುತ್ತೇವೆ....
ಒತ್ತುವರಿದಾರರ ವಿರುದ್ಧ ಕ್ರಮ: ಕರುಣಾಕರ ರೆಡ್ಡಿ
ಕೈಕಟ್ಟಿ ಕೂರುವುದಿಲ್ಲ: ಈಶ್ವರಪ್ಪ ಪುನರುಚ್ಚಾರ
ಮನರಂಜನೆ
ಚಿತ್ರ ಸುದ್ದಿ - ಕಬಡ್ಡಿ ಈಗ ವಿವಾದದಲ್ಲಿದೆ. ಅದು ಹೊರಗಿನವರ ನಡುವೆ ವಿವಾದವಲ್ಲ. ಸ್ವತ: ಚಿತ್ರದ ನಿರ್ದೇಶಕ ನರೇಂದ್ರ ಬಾಬು ಹಾಗೂ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕಿಶೋರ್ ನಡುವೆ. ಇತ್ತೀಚೆಗೆ ಕಬ್ಬಡ್ಡಿ ಚಿತ್ರತಂಡ ಕರೆದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರಬಾಬು ನೇರವಾಗಿ ಕಿಶೋರ್‌ರನ್ನು ಟೀಕಿಸಿದರು.
ಮುಂದೆ ಓದಿ|ಮತ್ತಷ್ಟು...