ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪೊಲೀಸ್ ಮಹಾನಿರ್ದೇಶಕರಾಗಿ ಶ್ರೀಕುಮಾರ್
ಬೆಂಗಳೂರು, ಮಂಗಳವಾರ, 1 ಜುಲೈ 2008   ( 17:13 IST )
ಪೊಲೀಸ್ ಮಹಾನಿರ್ದೇಶಕರಾಗಿ ಆರ್. ಶ್ರೀಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಸುರಕ್ಷಿತ-ಸುಭದ್ರ ಕರ್ನಾಟಕ ನಮ್ಮ ಧ್ಯೇಯ ಎಂದರು.

ರಾಜ್ಯ ಪೊಲೀಸರು ದಕ್ಷತೆಗೆ ಹೆಸರಾಗಿದ್ದಾರೆ. ಇಲಾಖೆಯನ್ನು ಉತ್ತುಂಗಕ್ಕೇರಿಸಿ ಅದರ ಕೀರ್ತಿಯನ್ನು ಹೆಚ್ಚಿಸಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ಇಲಾಖೆಯ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಜನರ ಬೇಡಿಕೆಗೆ ತಕ್ಕಂತೆ ಕಾರ್ಯನಿರ್ವಹಿಸಿ ಶಾಂತಿ-ಸುವ್ಯವಸ್ಥೆ ಕಾಪಾಡಲು ತಳಮಟ್ಟದಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಸಿಬ್ಬಂದಿ ಹಾಗೂ ಮೂಲಸೌಕರ್ಯ ವ್ಯವಸ್ಥೆ ಹೆಚ್ಚಿಸಿಕೊಳ್ಳಲು ಪ್ರಯತ್ನಿಸಲಾಗುತ್ತದೆ. ಇದ್ದ ಸಿಬ್ಬಂದಿಗಳಿಗೆ ತರಬೇತಿ ನೀಡಿ ಅವರ ಸಾಮರ್ಥ್ಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತೇನೆ ಎಂದ ಶ್ರೀಕುಮಾರ್, ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದರು.

ಪ್ರತಿಯೊಬ್ಬರಿಗೂ ಕಾನೂನಿನ ಚೌಕಟ್ಟಿನೊಳಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಅವಕಾಶವಿದೆ. ಅದನ್ನು ಮೀರಿ ಹಿಂಸಾಚಾರಕ್ಕೆ ತೊಡಗಿದವರನ್ನು ಸಹಿಸುವುದಿಲ್ಲ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮನೆ ವಾಸ್ತು ಬದಲಿಯಲ್ಲಿ ಸಚಿವ ಕರುಣಾಕರ ರೆಡ್ಡಿ
ವಿಮಾನನಿಲ್ದಾಣದಿಂದ ಹೆಲಿಕಾಪ್ಟರ್ ಸೇವೆ
ಅಮ‌್ಯೂಸ್‌ಮೆಂಟ್ ರೈಡ್‌ನಲ್ಲಿ ಮಹಿಳೆ ಬಲಿ
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಮಹಿಳಾ ಆಯೋಗಕ್ಕೆ ಮತ್ತೆ ನೇಸರ್ಗಿ
ಅತಿಕ್ರಮಣಕಾರರ ವಿರುದ್ಧ ಶಿಸ್ತುಕ್ರಮ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರೈತರಿಗೆ ಉಚಿತ ವಿದ್ಯುತ್ ಅಸಾಧ್ಯ: ಮುಖ್ಯಮಂತ್ರಿ
ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುತ್ತೇವೆ....
ಒತ್ತುವರಿದಾರರ ವಿರುದ್ಧ ಕ್ರಮ: ಕರುಣಾಕರ ರೆಡ್ಡಿ
ಕೈಕಟ್ಟಿ ಕೂರುವುದಿಲ್ಲ: ಈಶ್ವರಪ್ಪ ಪುನರುಚ್ಚಾರ
ಮನರಂಜನೆ
ಚಿತ್ರ ಸುದ್ದಿ - ಕಬಡ್ಡಿ ಈಗ ವಿವಾದದಲ್ಲಿದೆ. ಅದು ಹೊರಗಿನವರ ನಡುವೆ ವಿವಾದವಲ್ಲ. ಸ್ವತ: ಚಿತ್ರದ ನಿರ್ದೇಶಕ ನರೇಂದ್ರ ಬಾಬು ಹಾಗೂ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕಿಶೋರ್ ನಡುವೆ. ಇತ್ತೀಚೆಗೆ ಕಬ್ಬಡ್ಡಿ ಚಿತ್ರತಂಡ ಕರೆದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರಬಾಬು ನೇರವಾಗಿ ಕಿಶೋರ್‌ರನ್ನು ಟೀಕಿಸಿದರು.
ಮುಂದೆ ಓದಿ|ಮತ್ತಷ್ಟು...