|
| ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್ |
| ಬೆಂಗಳೂರು, ಮಂಗಳವಾರ, 1 ಜುಲೈ 2008 ( 17:53 IST ) | |
ನಿಗದಿತ ಅವಧಿಯೊಳಗೆ ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವ ಡಿ.ಸುಧಾಕರ್ ಅವರಿಗೂ ನೋಟಿಸ್ ಜಾರಿಮಾಡಿದ್ದು, ಆ.30ರೊಳಗೆ ಆಸ್ತಿ ವಿವರ ಸಲ್ಲಿಸಬೇಕೆಂದು ಲೋಕಾಯುಕ್ತ ನ್ಯಾ. ಎನ್. ಸಂತೋಷ್ ಹೆಗಡೆ ತಾಕೀತು ಮಾಡಿದ್ದಾರೆ. ಇದೇ ಸಮಯದಲ್ಲಿ ಜನಪ್ರತಿನಿಧಿಗಳು ತಾವೇ ಮಾಡಿದ ಕಾನೂನಿಗೆ ಗೌರವ ತೋರದಿರುವುದು ನಾಚಿಕೆಗೇಡಿನ ವಿಷಯ ಎಂದು ಕಿಡಿಕಾರಿದ್ದಾರೆ.
ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್. ಶಾಸಕ ದಿನೇಶ್ ಗುಂಡೂರಾವ್, ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಹಾಗೂ ಎಂಟು ಮಂದಿ ವಿಧಾನಪರಿಷತ್ ಸದಸ್ಯರೂ ಆಸ್ತಿ ವಿವರ ಸಲ್ಲಿಸದಿರುವವರ ಪಟ್ಟಿಯಲ್ಲಿ ಸೇರಿದ್ದಾರೆ.
ಕಳೆದ ವಿಧಾನಮಂಡಲದಲ್ಲಿ ಶಾಸಕರಾಗಿದ್ದು ಈಗ ಚುನಾವಣೆಯಲ್ಲಿ ಸೋತಿರುವವರೂ ಕೂಡ ಆಸ್ತಿವಿವರ ಸಲ್ಲಿಸಬೇಕೆಂದು ಆದೇಶಿಸಲಾಗಿದೆ. ಮಾಜಿಮುಖ್ಯಮಂತ್ರಿ ಧರ್ಮಸಿಂಗ್, ಮಾಜಿ ಸಚಿವರುಗಳಾದ ಆರ್.ವಿ.ದೇಶಪಾಂಡೆ, ಚೆನ್ನಿಗಪ್ಪ ಮತ್ತು ಚಲುವರಾಯಸ್ವಾಮಿ ಅವರೂ ಸೇರಿದ್ದು ಈ ಬಾರಿಯ ಚುನಾವಣೆಯಲ್ಲಿ ಇವರೆಲ್ಲ ಸೋತಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕಬಡ್ಡಿ ಈಗ ವಿವಾದದಲ್ಲಿದೆ. ಅದು ಹೊರಗಿನವರ ನಡುವೆ ವಿವಾದವಲ್ಲ. ಸ್ವತ: ಚಿತ್ರದ ನಿರ್ದೇಶಕ ನರೇಂದ್ರ ಬಾಬು ಹಾಗೂ ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕಿಶೋರ್ ನಡುವೆ. ಇತ್ತೀಚೆಗೆ ಕಬ್ಬಡ್ಡಿ ಚಿತ್ರತಂಡ ಕರೆದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರಬಾಬು ನೇರವಾಗಿ ಕಿಶೋರ್‌ರನ್ನು ಟೀಕಿಸಿದರು. |
| |
|
|
|
|
|
|
|