ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪಕ್ಷೇತರರ ಸಚಿವ ಸ್ಥಾನಕ್ಕೆ ಕೊಕ್: ಬಂಗಾರಪ್ಪ ಬಾಂಬ್
ಮೈಸೂರು, 2 ಜುಲೈ 2008   ( 17:20 IST )
ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದು, ಈ ಮೂಲಕ ಪಕ್ಷೇತರರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಬಂಗಾರಪ್ಪ ಬಾಂಬ್ ಸಿಡಿಸಿದ್ದಾರೆ.

ಇಂದು(ಬುಧವಾರ) ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರವೇ ಪಕ್ಷೇತರರ ಸಚಿವರಿಗೆ ಹಾಗೂ ಶಾಸಕರಿಗೆ ಆಪತ್ತು ಎದುರಾಗಲಿದ್ದು, ಬಿಜೆಪಿ ಅವರನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಲಿದೆ ಎಂದು ತಿಳಿಸಿದ್ದಾರೆ.

ಆರು ಜನ ಶಾಸಕರ ಜೊತೆ ನಿರಂತರ ಸಂಪರ್ಕ ಹೊಂದಿರುವುದಾಗಿ ತಿಳಿಸಿದ ಅವರು, ಬಿಜೆಪಿಯಲ್ಲಿ ಪಕ್ಷೇತರರನ್ನು ಬದಿಗೊತ್ತುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಪಕ್ಷೇತರರು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಪಕ್ಷೇತರರ ಶಾಸಕರು ಶೀಘ್ರವೇ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಗಣಿ ಬಲದ ಮೇಲೆ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಆಗಿರುವ ರಸಗೊಬ್ಬರಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಅವರು ಆರೋಪಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಗೆ ಕೋಮುವಾದ ಶಕ್ತಿಗಳನ್ನು ಬಗ್ಗುಬಡಿಸಲು ಜಾತ್ಯಾತೀತ ಪಕ್ಷಗಳು ಒಗ್ಗೂಡಬೇಕು. ಈ ನಿಟ್ಟಿನಲ್ಲಿ ಜಾತ್ಯತೀತ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉಗ್ರರ ವಿಚಾರಣೆ ಧಾರವಾಡ ಕೋರ್ಟಿಗೆ ಹಸ್ತಾಂತರ
ಬೆಂಗಳೂರನ್ನು ಅನುಕರಿಸಲು ಸ್ಕಾಟ್‌ಲೆಂಡ್ ಯೋಜನೆ
ಕನಸು ನನಸಾಗದ ಯುವತಿಯ ಆತ್ಮಹತ್ಯೆ
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ವೇಗ ನಿಯಂತ್ರಕ ಹಿಂದಕ್ಕೆ ಪಡೆಯಲು ಮುಕ್ತ ಮನಸ್ಸು
ಚಿಕೂನ್‌ಗುನ್ಯಾ ರೋಗಕ್ಕೆ 3 ಲಕ್ಷ ಮಂದಿ ತುತ್ತು
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...