|
| ಉಗ್ರರ ವಿಚಾರಣೆ ಧಾರವಾಡ ಕೋರ್ಟಿಗೆ ಹಸ್ತಾಂತರ |
| ಹುಬ್ಬಳ್ಳಿ, ಬುಧವಾರ, 2 ಜುಲೈ 2008 ( 18:06 IST ) | |
ನಿಷೇಧಿತ ಸಿಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ 11 ಮಂದಿ ಶಂಕಿತ ಉಗ್ರರ ವಿಚಾರಣೆಯನ್ನು ಧಾರವಾಡ ಜಿಲ್ಲಾ ಕೋರ್ಟಿಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಇಂದು(ಬುಧವಾರ) ನಗರದ ಒಂದನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಗಿದಿದ್ದರಿಂದ ಬಂಧಿತ ಉಗ್ರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಂಧಿತ ಶಂಕಿತ ಉಗ್ರರ ಹೆಚ್ಚಿನ ವಿಚಾರಣೆಯ ಹಿನ್ನೆಲೆಯಲ್ಲಿ ಧಾರವಾಡ ಕೋರ್ಟಿಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಆವರಣದಲ್ಲಿ ಚಪ್ಪಲಿ ಗಲಿಬಿಲಿ
ಶಂಕಿತ ಉಗ್ರರನ್ನು ಕೋರ್ಟಿಗೆ ಹಾಜರು ಪಡಿಸಿದ ಸಂದರ್ಭದಲ್ಲಿ ಪಾಲಿಕೆ ಸದಸ್ಯನೊಬ್ಬ ಉಗ್ರರ ವಾಹನದತ್ತ ಚಪ್ಪಲಿ ಎಸೆದ ಘಟನೆ ಕೋರ್ಟ್ ಆವರಣದಲ್ಲಿ ನಡೆಯಿತು.
ಉಗ್ರನೋರ್ವ ನಗರ ಪಾಲಿಕೆ ಸದಸ್ಯರಿಗೆ ಚಪ್ಪಲಿ ತೋರಿಸಿದ್ದರಿಂದ ಕುಪಿತಗೊಂಡ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣನವರ್, ಉಗ್ರರ ವಾಹನದತ್ತ ಚಪ್ಪಲಿ ಎಸೆದರು. ಅಲ್ಲದೆ, ಶಂಕಿತ ಉಗ್ರರಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಅಲ್ಲಿದ್ದ ಕೆಲವರು ಕೂಗಿದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸ್ಥಳದಲ್ಲಿದ್ದ ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಂಡಿತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು. |
| |
|
|
|
|
|
|
|