ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿದ್ಯುತ್ ಕಾಮಗಾರಿ ಮುಗಿಸಲು ಈಶ್ವರಪ್ಪ ಸೂಚನೆ
ಬೆಂಗಳೂರು, ಬುಧವಾರ, 2 ಜುಲೈ 2008   ( 18:15 IST )
ಬೆಂಗಳೂರು ಮಹಾನಗರಕ್ಕೆ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ 920 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದ್ದಾರೆ.

ನಗರದ ವಿವಿಧೆಡೆಗಳಲ್ಲಿ ಸ್ಥಾಪಿಸಲಾಗಿರುವ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಇಂದು(ಬುಧವಾರ) ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

220 ಕಿಲೋವ್ಯಾಟ್ ವಿದ್ಯುತ್ ವಿತರಣೆ ಕೇಂದ್ರಗಳನ್ನು 8 ಸ್ಥಳಗಳಲ್ಲಿ 550 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವ ಕಾಮಗಾರಿ ಈಗಾಗಲೇ ಮುಗಿಯಬೇಕಿತ್ತು. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಇಂತಹ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಮಾತನಾಡಿದ ಅವರು, ಕೃಷಿ ಚಟುವಟಿಕೆಗಳ ಪಂಪ್ಸೆಟ್ಗೆ ಉಚಿತ ವಿದ್ಯುತ್ ಒದಗಿಸಲು 850 ಕೋಟಿ ರೂ. ವೆಚ್ಚವಾಗುತ್ತದೆ. ಆದರೂ, ರೈತರಿಗೆ ಉಚಿತ ವಿದ್ಯುತ್ ಒದಗಿಸಲು ಬಜೆಟ್ಟಿನಲ್ಲಿ ಮುಖ್ಯಮಂತ್ರಿಗಳು ಅನುದಾನ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕೊಪ್ಪಳ ವರದಿ:

ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂದು ಆರೋಪಿಸಿ ಕೊಪ್ಪಳ ಶಾಸಕರ ನೇತೃತ್ವದಲ್ಲಿ ಬುಧವಾರ ಕೆಪಿಟಿಸಿಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಶಾಸಕ ಕರಡಿ ಸಂಗಣ್ಣ ಅವರ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ನಡೆಸಿದ ಧರಣಿಯಲ್ಲಿ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿದರು. ಕೊಪ್ಪಳ ಜಿಲ್ಲೆಗೆ 300 ಮೆಗವ್ಯಾಟ್ ವಿದ್ಯುತ್ ಅಗತ್ಯವಿದೆ. ಆದರೆ ಈಗ ಜಿಲ್ಲೆಗೆ ಕೇವಲ 30 ಮೆಗವ್ಯಾಟ್ ವಿದ್ಯುತ್ ನೀಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉಗ್ರರ ವಿಚಾರಣೆ ಧಾರವಾಡ ಕೋರ್ಟಿಗೆ ಹಸ್ತಾಂತರ
ಪಕ್ಷೇತರರ ಸಚಿವ ಸ್ಥಾನಕ್ಕೆ ಕೊಕ್: ಬಂಗಾರಪ್ಪ ಬಾಂಬ್
ಬೆಂಗಳೂರನ್ನು ಅನುಕರಿಸಲು ಸ್ಕಾಟ್‌ಲೆಂಡ್ ಯೋಜನೆ
ಕನಸು ನನಸಾಗದ ಯುವತಿಯ ಆತ್ಮಹತ್ಯೆ
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ವೇಗ ನಿಯಂತ್ರಕ ಹಿಂದಕ್ಕೆ ಪಡೆಯಲು ಮುಕ್ತ ಮನಸ್ಸು
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...