|
| ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ |
| ಬೆಂಗಳೂರು, ಬುಧವಾರ, 2 ಜುಲೈ 2008 ( 19:08 IST ) | |
ವೇಗ ನಿಯಂತ್ರಕ ಅಳವಡಿಕೆ ಹಿಂತೆಗೆತ, ಸೇವಾ ತೆರಿಗೆ ರದ್ದು, ಡೀಸೆಲ್ ಮೇಲಿನ ಶುಲ್ಕ ಇಳಿಕೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೇಶದೆಲ್ಲೆಡೆ ಲಾರಿ ಮಾಲೀಕರ ಸಂಘವು ಕರೆದಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಗತ್ಯ ವಸ್ತುಗಳ ಸರಬರಾಜಿಗೆ ವಿನಾಯಿತಿ ನೀಡಲಾಗಿದ್ದರೂ, ಲಾರಿ ಮುಷ್ಕರದಿಂದ ಸಾರ್ವಜನಿಕರ ಮೇಲೆ ನೇರ ಪರಿಣಾಮ ಉಂಟಾಗಿದೆ. ಮರಳು, ಕಬ್ಬಿಣ, ಸಿಮೆಂಟ್, ತೈಲ ಸೇರಿದಂತೆ ಪ್ರತಿಯೊಂದು ವಸ್ತುಗಳನ್ನು ವಿತರಿಸುವ ಮಾಲೀಕರು ಹಾಗೂ ಖರೀದಿಸುವ ಗ್ರಾಹಕರಿಗೆ ಮುಷ್ಕರದ ಬಿಸಿ ತಟ್ಟಿದೆ.
ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಲಾರಿ ಮುಷ್ಕರ ಇನ್ನೆರಡು ದಿನ ಮುಂದುವರಿದರೆ ಅಗತ್ಯ ವಸ್ತುಗಳ ಬೆಲೆಗಳೂ ಹೆಚ್ಚಳವಾಗುವ ಸಾಧ್ಯತೆ ಕಂಡು ಬಂದಿದೆ.
ರಾಜ್ಯದೆಲ್ಲೆಡೆ ಲಾರಿ ಮುಷ್ಕರ ಬಹಳ ಶಾಂತಿಯುತವಾಗಿ ನಡೆಯುತ್ತಿದ್ದು, ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿ ಬಂದಿಲ್ಲ ಎಂದು ಬೆಂಗಳೂರು ನಗರದ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿಪಿನ್ ಗೋಪಾಲಕೃಷ್ಣ ತಿಳಿಸಿದ್ದಾರೆ.
ಈ ಮಧ್ಯೆ ಹಾಸನ ಜಿಲ್ಲಾ ಲಾರಿ ಮಾಲೀಕರ ಸಂಘ ಮುಷ್ಕರದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದು, ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ಅಲ್ಲದೆ, ದಕ್ಷಿಣ ಕನ್ನಡದಲ್ಲೂ ಎಂದಿನಂತೆ ಲಾರಿಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ವರದಿ ಬಂದಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು. |
| |
|
|
|
|
|
|
|