|
| ಕನ್ನಡ ಕಡ್ಡಾಯವಲ್ಲ: ಹೈಕೋರ್ಟ್ ತೀರ್ಪಿಗೆ ಖಂಡನೆ |
| ಬೆಂಗಳೂರು, ಗುರುವಾರ, 3 ಜುಲೈ 2008 ( 11:30 IST ) | |
ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಹೈಕೋರ್ಟ್ ತೀರ್ಪಿನಿಂದ ಕನ್ನಡ ಮತ್ತು ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂದು ಸಂವಿಧಾನದಲ್ಲಿಯೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ಮುಕ್ತ ಮಾರುಕಟ್ಟೆಯ ಖಾಸಗೀಕರಣ ನೀತಿಯನ್ನು ಶಿಕ್ಷಣ ಕ್ಷೇತ್ರದಲ್ಲೂ ಈಗ ಕಂಡು ಬಂದಿರುವುದು ದುರದೃಷ್ಟಕರ ಎಂದು ಪ್ರತಿಕ್ರಿಯಿಸಿದ ಹಿರಿಯ ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ, ಹೈಕೋರ್ಟ್ ತೀರ್ಪಿಗೆ ರಾಜ್ಯ ಸರ್ಕಾರ ತಡೆಯಾಜ್ಞೆ ನೀಡಬೇಕು. ಬಡವರಿಗೊಂದು ಶಿಕ್ಷಣ ಉಳ್ಳವರಿಗೊಂದು ಶಿಕ್ಷಣ ಎಂಬ ನೀತಿಗೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ.
ಭಾಷಾ ನೀತಿ ಕಾಪಾಡಲು ನಾವು ಬದ್ಧ. ಸದ್ಯದಲ್ಲೇ ಸಾಹಿತಿ, ಕನ್ನಡಪರ ಸಂಸ್ಥೆ, ಹೋರಾಟಗಾರರು ಶಿಕ್ಷಣ ತಜ್ಞರು ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|