|
| ಹಿಂದೂ ಪರ ಸಂಘಟನೆಗಳಿಂದ ಬಂದ್‌ಗೆ ಕರೆ |
| ಬೆಂಗಳೂರು, ಗುರುವಾರ, 3 ಜುಲೈ 2008 ( 11:35 IST ) | |
ಅಮರನಾಥ ದೇವಸ್ಥಾನ ಮಂಡಳಿಗೆ ನೀಡಿದ್ದ ಜಮೀನನ್ನು ಹಿಂದಕ್ಕೆ ಪಡೆದಿರುವ ಜಮ್ಮು ಕಾಶ್ಮೀರ ಸರ್ಕಾರದ ಕ್ರಮವನ್ನು ಖಂಡಿಸಿ, ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್‌ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಂಗಳೂರು, ಉಡುಪಿ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದ್ದು, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಕೆಲ ಕಡೆಗಳಲ್ಲಿ ಖಾಸಗಿ ಬಸ್‌ಗಳು ಬೀದಿಗಿಳಿದಿವೆ.
ಅಲ್ಲದೆ, ಕೆಲವೆಡೆ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಸ್ವಯಂ ಘೋಷಿತ ಬಂದ್‌ಗೆ ಬೆಂಬಲ ನೀಡಿದೆ. ವಾಹನಗಳು ರಸ್ತೆಗಿಳಿಯದೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹುಬ್ಬಳ್ಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ರಸ್ತೆಯುದ್ದಕ್ಕೂ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವುದರಿಂದ ಎಲ್ಲಾ ಕಡೆಗಳಲ್ಲೂ ಬಿಗಿ ಬಂದೋ ಬಸ್ತ್ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ ಹಿಂದೂ ಸಂಘಟನೆಗಳು ನೀಡಿರುವ ಬಂದ್ ರಾಜ್ಯ ಬಿಜೆಪಿ ಘಟಕ ಬೆಂಬಲ ಸೂಚಿಸಿದೆ.
ನೀರಸ ಪ್ರತಿಕ್ರಿಯೆ
ಬೆಂಗಳೂರು, ತುಮಕೂರು, ಕೊಪ್ಪಳ, ಮುಖ್ಯಮಂತ್ರಿ ತವರೂರಾದ ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಎಂದಿನಂತೆ ವಾಹನಗಳು ಸಂಚರಿಸುತ್ತಿದ್ದು, ದೈನಂದಿನ ಚಟುವಟಿಕೆಗಳಿಗೆ ತೊಂದರೆ ಉಂಟಾಗಿಲ್ಲ. ಅಲ್ಲದೆ, ಶಾಲಾ ಕಾಲೇಜುಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿಯೂ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|