|
| ಮಾತುಕತೆ: ಲಾರಿ ಮಾಲೀಕರಿಗೆ ಅಶೋಕ್ ಮನವಿ |
| ಬೆಂಗಳೂರು, ಗುರುವಾರ, 3 ಜುಲೈ 2008 ( 13:46 IST ) | |
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ ನಡೆಸುತ್ತಿರುವ ಮುಷ್ಕರದಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಆರ್. ಅಶೋಕ್, ಬಸ್ಗಳಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸಲಾಗುವುದು. ಲಾರಿ ಮಾಲೀಕರ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ವೇಗ ನಿಯಂತ್ರಕ ಕಡ್ಡಾಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರ ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆದು ಸರ್ಕಾರದ ಜೊತೆಯಲ್ಲಿ ಮಾತುಕತೆಗೆ ಮುಂದಾಗಬೇಕೆಂದು ಲಾರಿ ಮಾಲೀಕರು ಒಕ್ಕೂಟಕ್ಕೆ ಮನವಿ ಮಾಡಿದ ಅವರು, ಮಾತುಕತೆ ಮೂಲಕ ಈ ಸಮಸ್ಯೆ ಬಗೆಹರಿಸಬಹುದೆಂದು ತಿಳಿಸಿದ್ದಾರೆ.
ಮುಷ್ಕರದಿಂದ ಜನಜೀವನ ಅಸ್ತವ್ಯಸ್ಥ
ಲಾರೀ ಮಾಲೀಕರ ಮುಷ್ಕರದಿಂದ ಅಗತ್ಯ ವಸ್ತುಗಳ ಸರಬರಾಜಿನಲ್ಲಿ ಭಾರಿ ವ್ಯತ್ಯಯ ಕಂಡು ಬಂದಿದ್ದು, ಹೆಚ್ಚಿನ ಕಡೆಗಳಲ್ಲಿ ಅಗತ್ಯ ವಸ್ತುಗಳ ಪೂರೈಕೆ ಸಾಧ್ಯವಾಗಿಲ್ಲ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|