ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕುತೂಹಲ ಮೂಡಿಸಿದ ದೇವೇಗೌಡ-ಪಾಟೀಲ್ ಭೇಟಿ
ಬೆಂಗಳೂರು, 3 ಜುಲೈ 2008   ( 13:52 IST )
ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ. ಪಾಟೀಲ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ.

ವಿಧಾನಸಭೆ ಹಾಗೂ ವಿಧಾನಪರಿಷತ್ ಎರಡರಲ್ಲೂ ಸೋಲುಂಡ ಬಳಿಕ ಎಚ್.ಕೆ. ಪಾಟೀಲ್‌‌ಗೆ ಕಾಂಗ್ರೆಸ್ಸಿನಲ್ಲಿ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ. ಇದೇ ಸಂದರ್ಭದಲ್ಲಿ ಜೆಡಿಎಸ್ ಜೊತೆ ಮಾತುಕತೆಗೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಾಟೀಲ್, ವಿಧಾನಪರಿಷತ್ ಚುನಾವಣೆಯಲ್ಲಿ ದೇವೇಗೌಡರು ತಮಗೆ ಬೆಂಬಲ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಭೇಟಿ ಮಾಡಿದ್ದೆ. ಅಲ್ಲದೆ, ಪ್ರಸ್ತುತ ರಾಜಕೀಯದ ಕುರಿತು ಸಮಾಲೋಚನೆ ನಡೆಸಿದ್ದೇನೆ. ಈ ಭೇಟಿಗೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದು ತಿಳಿಸಿದ್ದಾರೆ.

ಆದರೆ ಕೆಲವು ಮೂಲಗಳ ಪ್ರಕಾರ, ಎರಡು ಚುನಾವಣೆಗಳಲ್ಲಿ ಸೋಲು ಕಂಡಿರುವ ತಮ್ಮನ್ನು ಪಕ್ಷದಲ್ಲಿ ಕಡೆಗೆಣಿಸಲಾಗುತ್ತಿದೆ ಎಂದು ಪಾಟೀಲರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಟೀಲ್ ಮುಂದಿನ ರಾಜಕೀಯ ಭವಿಷ್ಯದ ಕುರಿತು ಶೀಘ್ರವೇ ನಿರ್ಧಾರ ಹೊರಬೀಳುವ ಸಾಧ್ಯತೆಗಳಿವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ
ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ
ಭಾರತ್ ಬಂದ್‌ನಲ್ಲಿ ಭುಗಿಲೆದ್ದ ಹಿಂಸಾಚಾರ
ಮಾತುಕತೆ: ಲಾರಿ ಮಾಲೀಕರಿಗೆ ಅಶೋಕ್ ಮನವಿ
ಹಿಂದೂ ಪರ ಸಂಘಟನೆಗಳಿಂದ ಬಂದ್‌ಗೆ ಕರೆ
ಕನ್ನಡ ಕಡ್ಡಾಯವಲ್ಲ: ಹೈಕೋರ್ಟ್ ತೀರ್ಪಿಗೆ ಖಂಡನೆ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...