ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಭಾರತ್ ಬಂದ್‌ನಲ್ಲಿ ಭುಗಿಲೆದ್ದ ಹಿಂಸಾಚಾರ
ಬೆಳಗಾವಿ, ಗುರುವಾರ, 3 ಜುಲೈ 2008   ( 15:10 IST )
ಅಮರನಾಥ್ ದೇವಾಲಯ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕರೆದಿದ್ದ ಬಂದ್ ಕೆಲ ಕಡೆ ಹಿಂಸಾ ರೂಪ ತಾಳಿದೆ.ನಗರದ ಕ್ಲಬ್ ರೋಡ್‌ನಲ್ಲಿರುವ ನೀರಾವರಿ ಇಲಾಖೆ ಕಚೇರಿ ಮುಚ್ಚುವಂತೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಲಾಗಿದೆ.

ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿನ ನೀರಾವರಿ ಕಚೇರಿಗೆ ಏಕಾಏಕಿ ನುಗ್ಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಕಚೇರಿ ಅಧಿಕಾರಿಗಳನ್ನು ಹೊರಗೆ ಎಳೆತಂದು ಕಾರ್ಯಕರ್ತರು ಥಳಿಸಿದ್ದಾರೆ. ಅಲ್ಲದೆ, ಕಾರ್ಯಕರ್ತರು ಕಚೇರಿಯಲ್ಲಿ ಪೀಠೋಪಕರಣ ಧ್ವಂಸಗೊಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ವರದಿ:

ರಾಜ್ಯದೆಲ್ಲೆಡೆ ಹಬ್ಬಿರುವ ಭಾರತ ಬಂದ್‌ಗೆ ಬೆಂಗಳೂರು ಮುಂಜಾನೆ ಮೌನವಾಗಿತ್ತು. ಆದರೆ ಸಮಯ ಕಳೆದಂತೆ ಮುಷ್ಕರದ ಕಾವು ಏರತೊಡಗಿತು. ನಗರದ ಮಲ್ಲೇಶ್ವರಂ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕುತೂಹಲ ಮೂಡಿಸಿದ ದೇವೇಗೌಡ-ಪಾಟೀಲ್ ಭೇಟಿ
ಮಾತುಕತೆ: ಲಾರಿ ಮಾಲೀಕರಿಗೆ ಅಶೋಕ್ ಮನವಿ
ಹಿಂದೂ ಪರ ಸಂಘಟನೆಗಳಿಂದ ಬಂದ್‌ಗೆ ಕರೆ
ಕನ್ನಡ ಕಡ್ಡಾಯವಲ್ಲ: ಹೈಕೋರ್ಟ್ ತೀರ್ಪಿಗೆ ಖಂಡನೆ
ಮ‌ೂರು ತಿಂಗಳಲ್ಲಿ ಪಾಲಿಕೆ ಚುನಾವಣೆ: ಹೈಕೋರ್ಟ್ ಆದೇಶ
ಕನ್ನಡ ಕಡ್ಡಾಯ ಬೇಡ: ಹೈಕೋರ್ಟ್ ಮಹತ್ವದ ತೀರ್ಪು
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...