|
| ಸುಪ್ರಿಂಕೋರ್ಟ್ ಮೊರೆಗೆ ಕರವೇ ನಿರ್ಧಾರ |
| ಬೆಂಗಳೂರು, ಗುರುವಾರ, 3 ಜುಲೈ 2008 ( 18:07 IST ) | |
ಖಾಸಗಿ ಅನುದಾನಿತ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯವಿಲ್ಲ ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಬುದ್ದಿ ಜೀವಿಗಳು ಸುಪ್ರಿಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿವೆ.
ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ, ನ್ಯಾಯಾಲಯ ಮತ್ತು ನ್ಯಾಯಾಧೀಶರ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಕನ್ನಡಕ್ಕೆ ಧಕ್ಕೆ ಬಂದಾಗ ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ನ್ಯಾಯಾಲಯ ತೀರ್ಪನ್ನು ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸುವ ಸಂಬಂಧದ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಈ ಬಗ್ಗೆ ಚರ್ಚೆ ನಡೆಸಲು ಇದೇ ಶನಿವಾರದಂದು ತುರ್ತು ಸಭೆ ಕರೆಯಲಾಗಿದೆ. ಸಭೆಗೆ ಸಾಹಿತಿಗಳು, ಬುದ್ದಿಜೀವಿಗಳು, ಕನ್ನಡಪರ ಹೋರಾಟಗಾರರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೂಡ ವಿಷಾದ ವ್ಯಕ್ತಪಡಿಸಿದ್ದು, ಶೀಘ್ರವೇ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|