|
| ಜೆಡಿಎಸ್ ಮುಗಿಸಲು ಷಡ್ಯಂತ್ರ: ರೇವಣ್ಣ ಆರೋಪ |
| ಬೆಂಗಳೂರು, ಗುರುವಾರ, 3 ಜುಲೈ 2008 ( 18:12 IST ) | |
ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಯೋಜನೆಗಳಿಗೆ ತಡೆ ಹಾಕುವ ಪ್ರಯತ್ನವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.
ನಗರದಲ್ಲಿ ಇಂದು(ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯಕ್ಕೆ ಭೂಮಿ ಮಂಜೂರಾಗುವ ಮೊದಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಹಣ ಬಿಡುಗಡೆ ಮಾಡಿದ್ದರು.
ಅಲ್ಲದೆ, ಕೇಂದ್ರ ಸರ್ಕಾರ ಕೂಡ ಈ ಯೋಜನೆಗೆ ಸುಮಾರು 80 ಕೋಟಿರೂ. ಗಳನ್ನು ಬಿಡುಗಡೆ ಮಾಡಿದೆ. ಆದರೆ ಈ ಯೋಜನೆಯನ್ನು ಸ್ಥಳಾಂತರಿಸುವ ಕುರಿತು ಈಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಈ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಮ್ಮನ್ನು ಮತ್ತು ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ವಕ್ತಾರ ವೈಎಸ್.ವಿ.ದತ್ತಾ, ಶೀಘ್ರದಲ್ಲಿ ಬರಲಿರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ಸಿದ್ದಗೊಳ್ಳಲಿದೆ. ಈ ನಿಟ್ಟಿನಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಪಕ್ಷದ ಸಭೆ ನಡೆಯಲಿದ್ದು, ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದೆ ಎಂದು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|