|
| ಪಾಲಿಕೆ ಚುನಾವಣೆಗೆ ಪಕ್ಷಗಳ ಕಸರತ್ತು ಪ್ರಾರಂಭ |
| ಬೆಂಗಳೂರು, ಗುರುವಾರ, 3 ಜುಲೈ 2008 ( 18:45 IST ) | |
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹೈಕೋರ್ಟ್ ಮೂರು ತಿಂಗಳ ಗಡುವು ನೀಡಿರುವ ಬೆನ್ನಲ್ಲೆ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ಟಿಗಾಗಿ ಪೈಪೋಟಿ ಪ್ರಾರಂಭಗೊಂಡಿದೆ.
ಈಗಾಗಲೇ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಜಯಭೇರಿ ಬಾರಿಸಿ ಬೀಗುತ್ತಿರುವ ಬಿಜೆಪಿಗೆ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಮೂರರಲ್ಲಿ ಎರಡು ಪಾಲನ್ನು ಪಡೆಯುವ ಹುಮ್ಮಸ್ಸಿನಲ್ಲಿ ಬಿಜೆಪಿ ಚುನಾವಣೆಗೆ ಇಳಿದಿದೆ. ಒಟ್ಟು 145 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿ ಚುನಾವಣೆಯಲ್ಲಿ ಸಾಕಷ್ಟು ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಭದ್ರಕೋಟೆಯನ್ನು ಮತ್ತಷ್ಟು ಧೂಳಿಪಟ ಮಾಡುವ ಸನ್ನಾಹದಲ್ಲಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ ಬಳಿಕ ಚುನಾವಣೆ ಕುರಿತು ಚಿಂತನೆ ನಡೆಸಲಾಗುವುದು ಎಂದು ಈಗಾಗಲೇ ನಗರಾಭಿವೃದ್ದಿ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಈ ಮಧ್ಯೆ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗಳಿಸಲಾಗದ ಕಾಂಗ್ರೆಸ್ ಬಿಬಿಎಂಪಿ ಚುನಾವಣೆ ಮೂಲಕವಾದರೂ ಪ್ರತಿಷ್ಠೆಯನ್ನು ಉಳಿಸುವ ಪ್ರಯತ್ನದಲ್ಲಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಕಾರ್ಯತಂತ್ರ ರೂಪಿಸಲು ವೇದಿಕೆ ಸಜ್ಜುಗೊಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಚುನಾವಣೆ ಎದುರಿಸಲು ಸಿದ್ದಗೊಂಡಿದೆ.
ಇದೇ ವೇಳೆ ಜೆಡಿಎಸ್ ಕೂಡ ಸುಮ್ಮನೆ ಕೈಕಟ್ಟಿ ಕೂತಿಲ್ಲ. ನಾಳೆಯಿಂದಲೇ ಪಾಲಿಕೆ ಚುನಾವಣೆ ಕುರಿತು ಸಭೆ ನಡೆಸಲು ತೀರ್ಮಾನಿಸಿದೆ. ಪಕ್ಷದ ವರಿಷ್ಠರು, ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|