|
| ಲಾರಿ ಮುಷ್ಕರ, ಬಂದ್‌ನಿಂದ ಕಂಗೆಟ್ಟ ಶ್ರೀಸಾಮಾನ್ಯ |
| ಬೆಂಗಳೂರು, 3 ಜುಲೈ 2008 ( 18:48 IST ) | |
ಒಂದು ಕಡೆ ಲಾರೀ ಮುಷ್ಕರ ಇನ್ನೊಂದೆಡೆ ವಿಶ್ವಹಿಂದೂ ಪರಿಷತ್ ಕರೆಕೊಟ್ಟಿರುವ ಬಂದ್‌ನಿಂದಾಗಿ ರಾಜ್ಯದೆಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.ಎರಡನೇ ದಿನಕ್ಕೆ ಕಾಲಿಟ್ಟಿರುವ ಲಾರಿ ಮುಷ್ಕರದಿಂದಾಗಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತೀವ್ರ ಪರಿಣಾಮ ಉಂಟಾಗಿದೆ. ರಾಜ್ಯಕ್ಕೆ ಬರಬೇಕಾದ ಸರಕು ಹಾಗೂ ವಾಣಿಜ್ಯ ಉದ್ದೇಶದ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ದಿನಬಳಕೆಯ ವಸ್ತುಗಳು ಗಗನಕ್ಕೇರಿದ್ದು, ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಈ ನಡುವೆ ರಾಜ್ಯದಲ್ಲಿ ಬೆಳೆದ ತರಕಾರಿ ಹೊರ ರಾಜ್ಯಗಳಿಗೆ ಸಾಗಾಟ ಮಾಡಲಾಗದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೆ, ಸೂಕ್ತ ಮಾರುಕಟ್ಟೆ ದೊರೆಯದೆ ತರಕಾರಿಗಳು ಕೊಳೆಯಲಾರಂಭಿಸಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೇ ವೇಳೆ ಅಮರನಾಥ ದೇಗುಲಕ್ಕೆ ನೀಡಲಾಗಿದ್ದ ಜಮೀನನ್ನು ಜಮ್ಮು ಕಾಶ್ಮೀರ ಸರ್ಕಾರ ವಾಪಸ್ ಪಡೆದಿರುವುದನ್ನು ವಿರೋಧಿಸಿ ದೇಶದೆಲ್ಲೆಡೆ ವಿಶ್ವ ಹಿಂದೂ ಪರಿಷತ್ ಕರೆದಿರುವ ಬಂದ್‌ನಿಂದಾಗಿ ಮತ್ತೆ ಜನತೆ ಪರದಾಡುವಂತಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ಸಾರ್ವಜನಿಕರು ಅಗತ್ಯ ವಸ್ತುಗಳ ಕೊರತೆ ಅನುಭವಿಸಿದರು. ಒಟ್ಟಿನಲ್ಲಿ ಈ ಬೆಳವಣಿಗೆಯಿಂದ ಜನಸಾಮಾನ್ಯ ತತ್ತರಿಸಿಹೋಗಿದ್ದಾನೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ |
| |
|
|
|
|
|
|
|